ಸಳ್ಯ: ಕುರುಂಜಿ ವೆಂಕಟ್ರಮಣಗೌಡ ಪಾಲಿಟೆಕ್ನಿಕ್‍ನ 2019-20ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಇತ್ತಿಚೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‍ನ ಜತೆ ಕಾರ್ಯದರ್ಶಿ ಹೇಮನಾಥ್ ಕೆ.ವಿ ಅಧ್ಯಕ್ಷತೆ ವಹಿಸಿದ್ದರು. ಅತಿಥಿಯಾಗಿ ನೆಹರೂ ಮೆಮೋರಿಯಲ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಾಲಚಂದ್ರಗೌಡ ಭಾಗವಹಿಸಿ ಶುಭ ಹಾರೈಸಿದರು.
ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಗೌಡ ಬೊಳ್ಳೂರು ವಿದ್ಯಾರ್ಥಿ ಸಂಘದ ಅಗತ್ಯತೆ ಹಾಗೂ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿ ಕ್ಷೇಮಾಧಿಕಾರಿ ಮಧುಕುಮಾರ್ ಬಿ.ಆರ್ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಚರಿತ್ ರೈಎಸ್ ಸರ್ವರ ಸಹಕಾರ ಕೋರಿದರು. ಸಮಾರಂಭದ ವೇದಿಕೆಯಲ್ಲಿ ಉಪ ಪ್ರಾಂಶುಪಾಲ ಜಯಪ್ರಕಾಶ್ ಕೆ, ಕಛೇರಿ ಅಧೀಕ್ಷಕ ರಾಮಚಂದ್ರಗೌಡ ಪಲ್ಲತಡ್ಕ, ವಿದ್ಯಾರ್ಥಿ ಸಲಹೆಗಾರ ಅನಿಲ್ ಕುಮಾರ್ ಎಸ್ ಹಾಗೂ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯದರ್ಶಿ ಕಿಶೋರ್ ಎ.ಪಿ ಸ್ವಾಗತಿಸಿ ಕಾರ್ಯದರ್ಶಿ ರಕ್ಷಿತ್ ವಂದಿಸಿದರು. ಗ್ರೀಷ್ಮಾ ಕಾರ್ಯಕ್ರಮ ನಿರೂಪಿಸಿದರು.
ನಮಗೆ ಸಂಬಂಧಿಸಿದ್ದ ಅಲ್ಲ, ಕಾನೂನು ಇದೆ, ಇಲಾಖೆಗಳು ಇವೆ, ತನಿಖೆಯಾಗುತ್ತಿದೆ. ಹೀಗಾಗಿ ಮಾತನಾಡಬಾರದು,…
ನರೇಗಾ ಸೇರಿದಂತೆ ಇತರೆ ಗ್ರಾಮೀಣ ಕೆಲಸಗಳಲ್ಲಿ ದುಡಿಯುವ ಮಹಿಳೆಯರ ನೆರವಿಗೆ ಬಂದಿರುವ ರಾಜ್ಯ…
ಕಳೆದ 11 ವರ್ಷಗಳಲ್ಲಿ ಎನ್ ಡಿಎ ಸರ್ಕಾರ ರೈತರ ಆದಾಯ ದ್ವಿಗುಣ ಮತ್ತು…
ಕೃಷಿ ಬದುಕಿನ ಮಹಿಳೆಯೊಬ್ಬರು ತನ್ನದೇ ಕೃಷಿ ಚಟುವಟಿಕೆಯಲ್ಲಿ ಯಾವುದೇ ಸಂಕೋಚ ತೋರದೆ, ಅಡಿಕೆ…
ಮಂಗಳವಾರ ಉತ್ತರಾಖಂಡದ ಗುಡ್ಡಗಾಡು ರಾಜ್ಯದ ಧರಾಲಿ ಜಿಲ್ಲೆಯಲ್ಲಿ ಭಾರಿ ಮೇಘಸ್ಫೋಟ ಸಂಭವಿಸಿದೆ. ಖೀರ್…
ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಹನುಮಂತಪುರ ಗ್ರಾಮದ ಕೆರೆಯ ಕೋಡಿ ನೀರು ಹರಿಯುವ…