ಸುಳ್ಯ: ಡಾ.ಕುರುಂಜಿ ವೆಂಕಟ್ರಮಣ ಗೌಡರ 91ನೇ ಜನ್ಮ ದಿನಾಚರಣೆಯ ಪ್ರಯುಕ್ತ ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ನಡೆಯುವ ಕೆ.ವಿ.ಜಿ ಸುಳ್ಯ ಹಬ್ಬದ ಪ್ರಯುಕ್ತ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೆ.ವಿ.ಜಿ ಸುಳ್ಯ ಹಬ್ಬ ಸಮಿತಿಯ ಕ್ರೀಡಾ ಸಂಚಾಲಕ ದೊಡ್ಡಣ್ಣ ಬರೆಮೇಲು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 18 ವರ್ಷದ ಪುರುಷರ ಕಬಡ್ಡಿ ಪಂದ್ಯಾಟ ಈಗಾಗಲೇ ನಡೆಸಲಾಗಿದೆ. ಡಿ.15ರಂದು ಗಾಂಧೀನಗರ ಶಾಲಾ ಮೈದಾನದಲ್ಲಿ ಪುಟ್ ಬಾಲ್ ಪಂದ್ಯಾಟ ನಡೆಯಲಿದೆ. ಸುಳ್ಯ ತಾಲೂಕು ಬ್ಯಾಡ್ಮಿಂಟನ್ ಅಸೋಸಿಯೇಶನ್ ವತಿಯಿಂದ ಡಿ.21 ರಂದು ಅಂತಾರಾಜ್ಯ ಮಟ್ಟದ ಪುರುಷರ ಬ್ಯಾಡ್ಮಿಂಟನ್ , ಡಿ.22 ರಂದು ಸುಳ್ಯ ತಾಲೂಕು ಮಟ್ಟದ ಪುರುಷ, ಮಹಿಳಾ, ಬಾಲಕ, ಬಾಲಕಿಯರ ಬ್ಯಾಡ್ಮಿಂಟನ್ ಪಂದ್ಯ ಕುರುಂಜಿಗುಡ್ಡೆಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಡಿ.24ರಂದು ಸುಳ್ಯ ತಾಲೂಕು ಲಗೋರಿ ಅಸೋಸಿಯೇಷನ್ ಮತ್ತು ದ.ಕ.ಜಿಲ್ಲಾ ಲಗೋರಿ ಅಸೋಸಿಯೇಷನ್ ವತಿಯಿಂದ ರಾಜ್ಯಮಟ್ಟದ ಹೊನಲು ಬೆಳಕಿನ ಲಗೋರಿ ಪಂದ್ಯಾಟ ನಡೆಯಲಿದೆ. ಅಪರಾಹ್ನ ಎರಡರಿಂದ ತಾಲೂಕು ಹಾಗು ಜಿಲ್ಲೆಯ ಲಗೋರಿ ತಂಡಗಳ ಮಧ್ಯೆ ನಾಕೌಟ್ ಮಾದರಿಯ ಪಂದ್ಯಾಟ ನಡೆಯಲಿದ್ದು ಸೆಮಿಫೈನಲ್ ಗೆ ಬಂದ ನಾಲ್ಕು ತಂಡಗಳು ಮತ್ತು ಇತರ ಜಿಲ್ಲೆಗಳಿಂದ ಬಂದ ನಾಲ್ಕು ತಂಡಗಳು ಸೇರಿ ಎಂಟು ತಂಡಗಳ ಮಧ್ಯೆ ಲೀಗ್ ಮಾದರಿಯ ಪಂದ್ಯಾಟ ನಡೆಯಲಿದೆ. ಡಿ.25ರಂದು ಮಹಿಳೆಯರಿಗೆ ತ್ರೋಬಾಲ್ ಪಂದ್ಯಾಟ, ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ವತಿಯಿಂದ ತಾಲೂಕು ಮಟ್ಟದ ಪುರುಷರ ಕಬಡ್ಡಿ ಪಂದ್ಯಾಟ ನಡೆಯಲಿದೆ ಎಂದು ಅವರು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ, ಅಬ್ದುಲ್ ರಹಿಮಾನ್ ಮೊಗರ್ಪಣೆ, ಎನ್.ಎ.ರಾಮಚಂದ್ರ ಇದ್ದರು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…