ಸುಳ್ಯ: ಅಮರ ಸುಳ್ಯದ ಶಿಲ್ಪಿ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಸಂಸ್ಥಾಪಕ ಡಾ. ಕುರುಂಜಿ ವೆಂಕಟ್ರಮಣ ಗೌಡರ 91 ನೇ ಜನ್ಮ ದ ಅಂಗವಾಗಿ ಸ್ಥಾಪಕರ ದಿನಾಚರಣೆ ಡಿ. 26 ರಂದು ನಡೆಯಲಿದೆ. ಇದರ ಅಂಗವಾಗಿ ಕೆ.ವಿ.ಜಿ. ಸಮೂಹ ಸಂಸ್ಥೆಗಳ ಸಿಬ್ಬಂದಿ ವರ್ಗದವರಿಗೆ ಕ್ರೀಡಾಕೂಟ ಡಿ. 13 ರಂದು ಕೆ.ವಿ.ಜಿ. ಕ್ರೀಡಾಂಗಣದಲ್ಲಿ ನಡೆಯಿತು.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಪ್ರಧಾನ ಕಾರ್ಯದರ್ಶಿ ಡಾ.ರೇಣುಕಾ ಪ್ರಸಾದ್ ಕೆ.ವಿ. ಕ್ರೀಡಾ ಧ್ವಜಾರೋಹಣ ನೆರವೇರಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಬಳಿಕ ಸಿಬ್ಬಂದಿಗಳಿಂದ ಪಥ ಸಂಚಲನ ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಜತೆ ಕಾರ್ಯದರ್ಶಿ ಕೆ.ವಿ. ಹೇಮನಾಥ್, ನಿರ್ದೇಶಕ ಅಕ್ಷಯ್ ಕೆ.ಸಿ, ಸ್ಥಾಪಕರ ದಿನಾಚರಣೆ ಸಮಿತಿ ಅಧ್ಯಕ್ಷ ಡಾ. ಎನ್.ಎ. ಜ್ಞಾನೇಶ್, ಕೆ.ವಿ.ಜಿ. ಸುಳ ಹಬ್ಬ ಸಮಿತಿ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಸುಧನ್ವಕೃಷ್ಣ ಪ್ರಾರ್ಥಿಸಿದರು.
ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಉಪಪ್ರಾಂಶುಪಾಲ ಡಾ. ಶ್ರೀಧರ್ ಸ್ವಾಗತಿಸಿ, ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಸುರೇಶ್ ವಿ. ವಂದಿಸಿದರು. ಕೆ.ವಿ.ಜಿ. ಐಟಿಐ ಉಪನ್ಯಾಸಕ ಭವಾನಿಶಂಕರ ಅಡ್ತಲೆ ಮತ್ತು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕಿ ಶೃತಿ ಪಿ.ಜಿ. ಕಾರ್ಯಕ್ರಮ ನಿರೂಪಿಸಿದರು. ಉದ್ಘಾಟನೆಯ ಬಳಿಕ ಕೆ.ವಿ.ಜಿ. ಸಿಬ್ಬಂದಿಗಳಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಿತು.