ಭಯೋತ್ಪಾದನೆ ಕುರಿತ ವಿಶ್ವಸಂಸ್ಥೆಯ ವರದಿಯು ಕೇರಳ ಮತ್ತು ಕರ್ನಾಟಕದಲ್ಲಿ ಗಮನಾರ್ಹ ಸಂಖ್ಯೆಯ ಐಸಿಸ್ ಭಯೋತ್ಪಾದಕರು ಇದ್ದಾರೆ ಎಂದು ಎಚ್ಚರಿಸಿದೆ. ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್‌ನಿಂದ 150 ರಿಂದ 200 ಉಗ್ರರನ್ನು ಹೊಂದಿರುವ ಭಯೋತ್ಪಾದಕ ಗುಂಪಿನಲ್ಲಿರುವ ಅಲ್-ಖೈದಾ ವಿವಿಧ ಪ್ರದೇಶದಲ್ಲಿ ದಾಳಿ ಯೋಜಿಸುತ್ತಿದೆ ಎಂದು ಈ ವರದಿ ಎಚ್ಚರಿಸಿದೆ.
ವಿಶೇಷವಾಗಿ ಕರ್ನಾಟಕ ಮತ್ತು ಕೇರಳದಲ್ಲಿ ಗಮನಾರ್ಹ ಸಂಖ್ಯೆಯಲ್ಲಿ ಐಸಿಸ್ ಭಯೋತ್ಪಾದಕರು ನೆಲೆ ಕಂಡುಕೊಂಡಿದ್ದಾರೆ ಎಂದು ವಿಶ್ವ ಸಂಸ್ಥೆಯ ವರದಿ ಉಲ್ಲೇಖಿಸಿದೆ.
ಐಸಿಸ್, ಅಲ್-ಖೈದಾ ಮತ್ತು ಇತರ ವ್ಯಕ್ತಿಗಳು ಮತ್ತು ಘಟಕಗಳು ಈ ತಂಡಕ್ಕೆ ಬೆಂಬಲ ನೀಡುತ್ತಿದ್ದು2-3 ಉಗ್ರ ಸಂಘಟನೆಗಳು ಜೊತೆಯಾಗಿ ತ್ರಿ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿರುವ ಈ ವರದಿ ಅಲ್ ಖೈದಾ ಗುಂಪಿನ ನಾಯಕ ಆಸಿಮ್ ಉಮರ್ ಮೃತಪಟ್ಟ ನಂತರ ಇದರ ನಾಯಕತ್ವವನ್ನು ಭಾರತದಲ್ಲಿ ಒಸಮಾ ಮೊಹಮ್ಮದ್ ವಹಿಸಿಕೊಂಡಿದ್ದಾನೆ. ಈತ ಮಾಜಿ ನಾಯಕನ ಸಾವಿಗೆ ಪ್ರತೀಕಾರದ ಕಾರ್ಯಾಚರಣೆಯನ್ನು ಯೋಜಿಸುತ್ತಿದ್ದಾನೆ ಎಂದು ವರದಿ ಮಾಡಿದೆ. ಇದಕ್ಕಾಗಿ ಈ ಗುಂಪಿನಲ್ಲಿ ಬಾಂಗ್ಲಾದೇಶ, ಭಾರತ, ಮ್ಯಾನ್ಮಾರ್ ಮತ್ತು ಪಾಕಿಸ್ತಾನದ 150 ರಿಂದ 200 ಸದಸ್ಯರು ಇದ್ದಾರೆ ಎಂದು ವರದಿಯಾಗಿದೆ. ಕಳೆದ ವರ್ಷ ಮೇ ತಿಂಗಳಲ್ಲಿ, ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕ ಗುಂಪು ಭಾರತದಲ್ಲಿ ಹೊಸ ಪ್ರಾಂತ್ಯ ವನ್ನು ಸ್ಥಾಪಿಸಿದೆ ಎಂದು ಹೇಳಿಕೊಂಡಿದೆ, ಇದು ಕಾಶ್ಮೀರದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವಿನ ಘರ್ಷಣೆಯ ನಂತರ ಬಂದ ಮೊದಲ ರೀತಿಯ ಘೋಷಣೆಯಾಗಿದೆ. ಇದೀಗ ಸಂಘಟನೆಯ ಪ್ರಮುಖರು ಹಾಗೂ ಸದಸ್ಯರು ಕರ್ನಾಟಕ ಹಾಗೂ ಕೇರಳದಲ್ಲಿ ನಲೆಯೂರಿದ್ದಾರೆ ಎಂದು ವಿಶ್ವ ಸಂಸ್ಥೆಯ ವರದಿಯಲ್ಲಿ ತಿಳಿಸಲಾಗಿದೆ.
( ಮೂಲ: ಪಿಟಿಐ)
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…