ಕೇರಳ ರೋಗಿಗಳಿಗೆ ಚಿಕಿತ್ಸೆ : ಆರೋಗ್ಯ ಇಲಾಖೆ ಸ್ಪಷ್ಟನೆ

April 13, 2020
7:27 PM

ಮಂಗಳೂರು : ಕೇರಳ ರಾಜ್ಯ ಕಾಸರಗೋಡು ಜಿಲ್ಲೆಯಿಂದ ತುರ್ತು ಚಿಕಿತ್ಸೆಗಾಗಿ ಮಂಗಳೂರಿನ ಕೆ.ಎಸ್.ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆ ದೇರಳಕಟ್ಟೆ ಇಲ್ಲಿಗೆ ಬಂದವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.

ತಸ್ಲೀಮ  ಎಂಬವರು ಎ.8 ರಂದು ಮಧ್ಯಾಹ್ನ 12.15 ಗಂಟೆಗೆ ತೀವ್ರವಾದ ತಲೆನೋವಿನ ಸಂಬಂಧ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದು ಹಿಂದಿರುಗಿರುತ್ತಾರೆ. ಎರಡನೇ ಪ್ರಕರಣದಲ್ಲಿ ಬಿ. ಫಾತಿಮ (65) ಎಂಬ ಮಹಿಳೆ ಏ.8 ರಂದು ಮಧ್ಯಾಹ್ನ 12.50 ಗಂಟೆಗೆ ಹೃದಯ ಸಂಬಂಧಿ ಖಾಯಿಲೆಗೆ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.   ಮೂರನೇ ಪ್ರಕರಣದಲ್ಲಿ ರೀಶಾನ ತೀವ್ರವಾದ ಹೊಟ್ಟೆನೋವಿಗೆ ಸಂಬಂಧಿಸಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದು ಹಿಂದಿರುಗಿರುತ್ತಾರೆ.

ನಾಭಿ ಎಂಬ ಮಹಿಳೆ ತಲೆನೋವು ಮತ್ತು ವಾಂತಿ ಇರುವ ಕಾರಣ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ಬಂದು ಚಿಕಿತ್ಸೆಗಾಗಿ ದಾಖಲಾಗಲು ಸೂಚಿಸಿದ್ದರೂ ಅದನ್ನು ನಿರಾಕರಿಸಿ ಹಿಂದಿರುಗಿರುತ್ತಾರೆ.

ಈ ಎಲ್ಲಾ ಪ್ರಕರಣಗಳು ಕೋವಿಡ್- 19 ಗೆ ಸಂಬಂಧಪಟ್ಟಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ, ದ.ಕ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!
July 29, 2026
6:52 AM
by: ದ ರೂರಲ್ ಮಿರರ್.ಕಾಂ
ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ
July 29, 2026
6:42 AM
by: ದ ರೂರಲ್ ಮಿರರ್.ಕಾಂ
ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ
July 28, 2026
11:25 PM
by: ಮಹೇಶ್ ಪುಚ್ಚಪ್ಪಾಡಿ
ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!
July 28, 2026
10:03 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror