ಮಂಗಳೂರು : ಕೇರಳ ರಾಜ್ಯ ಕಾಸರಗೋಡು ಜಿಲ್ಲೆಯಿಂದ ತುರ್ತು ಚಿಕಿತ್ಸೆಗಾಗಿ ಮಂಗಳೂರಿನ ಕೆ.ಎಸ್.ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆ ದೇರಳಕಟ್ಟೆ ಇಲ್ಲಿಗೆ ಬಂದವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.
ತಸ್ಲೀಮ ಎಂಬವರು ಎ.8 ರಂದು ಮಧ್ಯಾಹ್ನ 12.15 ಗಂಟೆಗೆ ತೀವ್ರವಾದ ತಲೆನೋವಿನ ಸಂಬಂಧ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದು ಹಿಂದಿರುಗಿರುತ್ತಾರೆ. ಎರಡನೇ ಪ್ರಕರಣದಲ್ಲಿ ಬಿ. ಫಾತಿಮ (65) ಎಂಬ ಮಹಿಳೆ ಏ.8 ರಂದು ಮಧ್ಯಾಹ್ನ 12.50 ಗಂಟೆಗೆ ಹೃದಯ ಸಂಬಂಧಿ ಖಾಯಿಲೆಗೆ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಮೂರನೇ ಪ್ರಕರಣದಲ್ಲಿ ರೀಶಾನ ತೀವ್ರವಾದ ಹೊಟ್ಟೆನೋವಿಗೆ ಸಂಬಂಧಿಸಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದು ಹಿಂದಿರುಗಿರುತ್ತಾರೆ.
ನಾಭಿ ಎಂಬ ಮಹಿಳೆ ತಲೆನೋವು ಮತ್ತು ವಾಂತಿ ಇರುವ ಕಾರಣ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ಬಂದು ಚಿಕಿತ್ಸೆಗಾಗಿ ದಾಖಲಾಗಲು ಸೂಚಿಸಿದ್ದರೂ ಅದನ್ನು ನಿರಾಕರಿಸಿ ಹಿಂದಿರುಗಿರುತ್ತಾರೆ.
ಈ ಎಲ್ಲಾ ಪ್ರಕರಣಗಳು ಕೋವಿಡ್- 19 ಗೆ ಸಂಬಂಧಪಟ್ಟಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ, ದ.ಕ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಸಣ್ಣ ಹಿಡುವಳಿದಾರರಿಗೆ ಈಗ ಕಾಳುಮೆಣಸು ಕೃಷಿಯ ಬಗ್ಗೆ ಸಾಕಷ್ಟು ಗೊಂದಲ. ಇಂತಹ ಸಮಯದಲ್ಲಿ…
ಪಶ್ಚಿಮ ಬಂಗಾಳದಲ್ಲಿ ಉಂಟಾಗಿರುವ ಸಣ್ಣ ಪ್ರಮಾಣದ ತಿರುಗುವಿಕೆಯು ಅಷ್ಟೇನು ಪರಿಣಾಮ ಬೀರುವ ಸಾಧ್ಯತೆಗಳು…
ಜೋಯಿಡಾ ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೀಸೈ ಗ್ರಾಮದಲ್ಲಿ ಭಾರೀ ಮಳೆಯಿಂದ…
ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…
ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್‌ಡಿಎಂ ಶಾಲೆ, ಮಂಗಳೂರು…
ಮುಂದಿನ 2 ರಿಂದ 3 ದಿನಗಳಲ್ಲಿ ದೇಶದ ಪೂರ್ವ, ಪಶ್ಚಿಮ, ಮಧ್ಯ ಮತ್ತು…