Advertisement
ರಾಜ್ಯ

ಕೊಡಗಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ : 100 ಕೋಟಿ ರೂಪಾಯಿ ಬಿಡುಗಡೆ

Share

ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ ಉಂಟಾದ ಪ್ರಕೃತಿ ವಿಕೋಪ ಸಂತ್ರಸ್ತರಿಗೆ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಗೆ ಒಟ್ಟು 536 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಹಿಂದೆ ಘೋಷಣೆ ಮಾಡಲಾಗಿದೆ. ಇದರಲ್ಲಿ ಪ್ರಥಮ ಹಂತದಲ್ಲಿ ತಕ್ಷಣ ರೂ.100 ಕೋಟಿ ಬಿಡುಗಡೆ ಮಾಡಲಾಗುವುದು  ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ.

Advertisement
Advertisement
Advertisement

ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆಗೆ ಆಗಮಿಸಿದ ಸಂದರ್ಭ ಕೂಡಿಗೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.ಜಿಲ್ಲಾಡಳಿತದ ಖಾತೆಯಲ್ಲಿರುವ ಹಣವನ್ನು ತಕ್ಷಣ ಪರಿಹಾರ ಕಾರ್ಯಗಳಿಗೆ ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ ಮುಖ್ಯಮಂತ್ರಿಗಳು ಭೂಕುಸಿತದಿಂದ ನಾಪತ್ತೆಯಾದವರ ಕುಟುಂಬಕ್ಕೆ ತಕ್ಷಣ ಒಂದು ಲಕ್ಷ ಪರಿಹಾರ ನೀಡುವುದು, ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ 5 ಲಕ್ಷ ಪರಿಹಾರ ಒದಗಿಸುವಂತೆ ನಿರ್ದೇಶನ ನೀಡಿದರು. ಕೇಂದ್ರದಿಂದ ಆಗಮಿಸಿದ ನೆರೆ ಅಧ್ಯಯನ ಅಧಿಕಾರಿಗಳ ತಂಡದ ವರದಿಗಳ ಆಧಾರದ ಮೇರೆಗೆ ಕೇಂದ್ರದಿಂದ ಇನ್ನೂ ಅಧಿಕ ಮೊತ್ತದ ಪರಿಹಾರ ಬಿಡುಗಡೆಗೊಳ್ಳಲಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದರು.

Advertisement

ಸಭೆಯಲ್ಲಿ ಪಾಲ್ಗೊಂಡಿದ್ದ ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಪ್ರಕೃತಿ ವಿಕೋಪದ ಸಂದರ್ಭ ಅರಣ್ಯ ಇಲಾಖೆಯನ್ನು ಹೊರತುಪಡಿಸಿ ಉಳಿದೆಲ್ಲಾ ಇಲಾಖೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿವೆ ಎಂದು ಆರೋಪಿಸಿದರು.ಮಡಿಕೇರಿ ವಿಭಾಗ ಡಿಎಫ್‍ಒ ಜನಪ್ರತಿನಿಧಿಗಳೊಂದಿಗೆ ಉದ್ದಟತನದಿಂದ ವರ್ತಿಸುತ್ತಿದ್ದಾರೆ. ಶಾಸಕರ ಕರೆಗಳಿಗೆ ಮನ್ನಣೆ ನೀಡುತ್ತಿಲ್ಲ. ಅರಣ್ಯ ನಡುವೆ ವಿದ್ಯುತ್ ಸಂಪರ್ಕ ಸಂದರ್ಭ ಇನ್ಸುಲೇಟಡ್ ಲೈನ್ ಅಳವಡಿಕೆ ಹೆಸರಿನಲ್ಲಿ ಮಾಲ್ದಾರೆ ಗಿರಿಜನರ ಹಾಡಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಬಾಡಗದಲ್ಲಿ ಬೆಳೆಗಾರರೊಬ್ಬರ ಮನೆಗೆ ನುಗ್ಗಿ ಅರಣ್ಯ ಇಲಾಖೆ ದೌರ್ಜನ್ಯ ಎಸಗಿದೆ ಎಂದು ಗಂಭೀರ ಆರೋಪ ಮಾಡಿದರು.ಡಿಎಫ್‍ಓ ಮತ್ತು ಸೆಸ್ಕ್ ಅಧಿಕಾರಿಗಳಿಂದ ವಿವರ ಬಯಸಿದ ಸಿಎಂ ಡಿಎಫ್‍ಒ ಪ್ರಭಾಕರ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಕೂಡಲೆ ವಿದ್ಯುತ್ ಸಂಪರ್ಕ ಕಲ್ಪಿಸಿ ಮುಂದಿನ 15 ದಿನಗಳ ಒಳಗಾಗಿ ಶಾಶ್ವತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಆದೇಶಿಸಿದರು.

Advertisement

ಶಾಸಕ ಅಪ್ಪಚ್ಚುರಂಜನ್ ಮಾತನಾಡಿ, ಕಳೆದ ಬಾರಿಗಿಂತ ಈ ಬಾರಿ ಜಿಲ್ಲೆಯಲ್ಲಿ ಹೆಚ್ಚಿನ ಮಟ್ಟದಲ್ಲಿ ಹಾನಿ ಉಂಟಾಗಿಲ್ಲ. ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಹೆಚ್ಚಿನ ಹಾನಿಯನ್ನು ತಡೆದಿದ್ದು ಅಧಿಕಾರಿಗಳ ಕಾರ್ಯವನ್ನು ಶ್ಲಾಘಿಸಿದರು.

ಸಭೆಯಲ್ಲಿ ಸಚಿವರುಗಳಾದ ಆರ್.ಅಶೋಕ್, ಎಸ್.ಸುರೇಶ್ ಕುಮಾರ್, ವಿಧಾನ ಪರಿಷತ್ ಸದಸ್ಯರುಗಳಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿಪಂ ಸಿಇಒ ಲಕ್ಷ್ಮಿಪ್ರಿಯ, ಸದಸ್ಯರಾದ ಚಂದ್ರಕಲಾ, ಮಂಜುಳಾ, ಚುನಾಯಿತ ಜನಪ್ರತಿನಿಧಿಗಳು, ಜಿಲ್ಲಾಡಳಿತದ ಅಧಿಕಾರಿಗಳು ಇದ್ದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬೆಳೆಗಾರರು ಏಕೆ ಜಾಗ್ರತರಾಗಬೇಕಿದೆ..?

ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…

23 hours ago

ಮೊಗ್ರದಲ್ಲಿ ಕಾಲಾವಧಿ ನೇಮ

https://youtu.be/YgcAfgYUbGQ?si=vp1TmN5dQYAkVPBy

2 days ago

ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ

ಸಿರಿಧಾನ್ಯಗಳ  ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು  ಕೃಷಿ ಇಲಾಖೆ  “ಸಿರಿಧಾನ್ಯ ಓಟ…

3 days ago

ಬೆಂಗಳೂರಿನಲ್ಲಿ ತುಂತುರು ಮಳೆ | ರಾಜ್ಯಾದ್ಯಂತ ಮುಂದಿನ ಐದು ದಿನ ಮಳೆ ಸಾಧ್ಯತೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…

3 days ago

ಹವಾಮಾನ ವರದಿ | 19.01.2025 | ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಕೃಷಿಕರೇ ಇರಲಿ ಎಚ್ಚರ |

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…

4 days ago