ಕೊಡಗಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ : ಸಚಿವ ಶ್ರೀರಾಮುಲು ಭರವಸೆ

September 28, 2019
2:18 PM

ಮಡಿಕೇರಿ : ಗುಡ್ಡಗಾಡು ಪ್ರದೇಶವಾಗಿರುವ ಕೊಡಗು ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ಹಾಗೂ ಅನುದಾನವನ್ನು ನೀಡಲಾಗುವುದು ಎಂದು ಭರವಸೆ ನೀಡಿದ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು, ತಾನೇ ಸ್ವತಃ ನೇತೃತ್ವ ವಹಿಸಿಕೊಂಡು ಈ ಭಾಗದ ಆಸ್ಪತ್ರೆಗಳ ಸುಧಾರಣೆಗೆ ವಿಶೇಷ ಸೌಲಭ್ಯ ಕಲ್ಪಿಸುವುದಾಗಿ ತಿಳಿಸಿದರು.
ಗುರುವಾರ ರಾತ್ರಿ ಇಲ್ಲಿನ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳನ್ನು ಖುದ್ದು ಪರಿಶೀಲಿಸಿ, ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಅಗತ್ಯತೆ ಕುರಿತು ಸಾರ್ವಜನಿಕರು ಗಮನಸೆಳೆದಿರುವುದಕ್ಕೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ನುಡಿದರು.

Advertisement

 

ಖಾಸಗಿ ಕಾರ್ಯನಿರ್ವಹಣೆ ತಡೆಗೆ ಕಾನೂನು: ಸರ್ಕಾರಿ ಆಸ್ಪತ್ರೆಯ ವೈದ್ಯರು ಎರಡು ದೋಣಿಯ ಪಯಣ ಮಾಡಬಾರದು. ಸರ್ಕಾರಿ ಆಸ್ಪತ್ರೆಯ ವೈದ್ಯರು, ಖಾಸಗಿ ಆಸ್ಪತ್ರೆಗಳಲ್ಲೂ ಕಾರ್ಯ ನಿರ್ವಹಿಸುವುದು ಅವರಿಗೆ ಶೋಭೆಯಲ್ಲ. ಒಂದು ವೇಳೆ ಅಲ್ಲಿಯೂ ಕೆಲಸ ಮಾಡುವುದಾದರೆ ಸರ್ಕಾರಿ ಆಸ್ಪತ್ರೆ ಬಿಟ್ಟು ತೊಲಗಲಿ ಎಂದೂ ಎಚ್ಚರಿಕೆ ನೀಡಿದ ಅವರು, ಈ ಸಂಬಂಧ ಕಾನೂನು ತರಲು ಪ್ರಯತ್ನಿಸುವುದಾಗಿ ನುಡಿದರು.
ಈ ಹಿಂದೆ ಕೆಪಿಎಸ್‍ಸಿಯಿಂದ ವೈದ್ಯರ ನೇಮಕಾತಿ ಮಾಡಿಕೊಳ್ಳಲಾಗುತ್ತಿತ್ತು. ಆದರೆ, ಈಗ ಅಗತ್ಯವಿರುವ ವೈದ್ಯರ ನೇಮಕಾತಿಗೆ ಡಿಎಚ್‍ಒಗಳಿಗೆ ಅಧಿಕಾರ ನೀಡಲಾಗಿದೆ, ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಸುಧಾರಣೆ ಆಗಬೇಕು. ಖಾಸಗಿ ಆಸ್ಪತ್ರೆಗಳಿಗೆ ಪ್ರತಿಸ್ಪರ್ಧಿಯಾಗಿ ಸರ್ಕಾರಿ ಆಸ್ಪತ್ರೆಗಳು ಬೆಳೆಯಬೇಕು. ಅದಕ್ಕೆ ವಿಶೇಷ ಅನುದಾನ ನೀಡಲಾಗುವುದು. ಆಸ್ಪತ್ರೆಗಳಲ್ಲಿರುವ ಯಂತ್ರೋಪಕರಣಗಳು ಸುಸ್ಥಿತಿಯಲ್ಲಿ ಇರಬೇಕು. ಸಾರ್ವಜನಿಕರಿಂದ ಈ ಬಗ್ಗೆ ದೂರುಗಳು ಕೇಳಿ ಬರಬಾರದು. ಈ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಿಗೆ ಪ್ರತ್ಯೇಕ ಅನುದಾನ ಮೀಸಲಿಡಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

ಆಸ್ಪತ್ರೆಯಲ್ಲೇ ವಾಸ್ತವ್ಯ: ನಗರದ ಜಿಲ್ಲಾ ಆಸ್ಪತ್ರೆಯ ಸ್ಥಿತಿಗತಿಯನ್ನು ಖುದ್ದು ಪರಿಶೀಲಿಸಿದ ಆರೋಗ್ಯ ಸಚಿವ ಬಿ. ಶ್ರೀರಾಮುಲು, ಬಳಿಕ ಆಸ್ಪತ್ರೆಯಲ್ಲೇ ವಾಸ್ತವ್ಯ ಮಾಡಿದರು. ಅದಕ್ಕೂ ಮೊದಲು ವಿವಿಧ ವಾರ್ಡ್‍ಗಳಿಗೆ ಭೇಟಿ ನೀಡಿ ರೋಗಿಗಳ ಆರೋಗ್ಯವನ್ನು ಸಚಿವರು ವಿಚಾರಿಸಿದರು.
ಸಚಿವರಿಗೆ ಜಿಲ್ಲಾಸ್ಪತ್ರೆಯ ನೆಲಮಹಡಿಯ ರೋಗಿಗಳ ಚಿಕಿತ್ಸಾ ಕೊಠಡಿ, 2ನೇ ಮಹಡಿಯ ಡೀನ್ ಕೊಠಡಿ, ಮೂರನೇ ಮಹಡಿಯ ವೈದ್ಯರ ಕೊಠಡಿಯಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿತ್ತು. ರೋಗಿಗಳಿಗೆ ವಿತರಣೆ ಮಾಡುವ ಬೆಡ್ ಹಾಗೂ ಬ್ಲಾಂಕೆಟ್ ನ್ನೇ ಸಚಿವರು ಮಲಗಲು ಬಳಸಿದ್ದು ವಿಶೇಷವಾಗಿತ್ತು.

Advertisement

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು
August 13, 2025
7:38 AM
by: The Rural Mirror ಸುದ್ದಿಜಾಲ
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
August 13, 2025
7:26 AM
by: The Rural Mirror ಸುದ್ದಿಜಾಲ
ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….
August 13, 2025
7:15 AM
by: ದ ರೂರಲ್ ಮಿರರ್.ಕಾಂ
ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ
August 12, 2025
8:47 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group