ಕೊಡಗಿನಲ್ಲಿ ಅಬ್ಬರಿಸಿದ ಮಳೆಗೆ ಬರೆ ಕುಸಿತ : ಹೆಚ್ಚಿದ ಆತಂಕ

July 20, 2019
10:04 PM

ಮಡಿಕೇರಿ: ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದೆರಡು ದಿನಗಳಿಂದ ಮುಂಗಾರು ಚುರುಕುಗೊಂಡಿದ್ದು ಭಾರೀ ಮಳೆ ಸುರಿಯಿತು. ಎರಡು ದಿನಗಳಿಂದಲೂ ರೆಡ್ ಅಲರ್ಟ್ ಎಂದು ಘೋಷಿಸಿದ್ದ ಹವಾಮಾನ ಇಲಾಖೆ ಇನ್ನು ಅಪಾಯ ಕಡಿಮೆ ಎಂದು ಶನಿವಾರ ಸಂಜೆ ಹೇಳಿದೆ.

ಎರಡು ದಿನಗಳ ಕಾಲ ಸುರಿದ ಮಳೆಗೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಬರೆ ಕುಸಿತ ಉಂಟಾಗಿದೆ. ನಗರದ ರಾಜಾಸೀಟು ರಸ್ತೆಯ, ಎಸ್‍ಪಿ ವಸತಿ ಗೃಹದ ಸಮೀಪ ಅಲ್ಪ ಪ್ರಮಾಣದ ಬರೆ ಕುಸಿದಿದೆ. ಗುಡ್ಡದ ಮೇಲೆ ಮತ್ತು ಕೆಳಗೆ ಮನೆ ಕಟ್ಟಿಕೊಂಡು ವಾಸಿಸುತ್ತಿರುವ ನಿವಾಸಿಗಳಿಗೆ ಆತಂಕ ಮೂಡಿದೆ.

ವಿರಾಜಪೇಟೆ ತಾಲೂಕಿನ ತಿತಿಮತಿ ಬಳಿ ರಸ್ತೆಗೆ ಮರ ಬಿದ್ದು, ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸುಮಾರು ಮುಕ್ಕಾಲು ಗಂಟೆ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.

ದಿನಪೂರ್ತಿ ಸುರಿಯುತ್ತಿರುವ ಹದವಾದ ಮಳೆಯಿಂದಾಗಿ ಜಿಲ್ಲಾ ಕೇಂದ್ರ ಮಡಿಕೇರಿ ಸುತ್ತಮುತ್ತಲ ವ್ಯಾಪ್ತಿಯಲ್ಲಿ ಮೈ ಕೊರೆಯುವ ಚಳಿಯ ವಾತಾವರಣ ನಿರ್ಮಾಣವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಮಡಿಕೇರಿಯಲ್ಲಿ 1 ಇಂಚು ಮಳೆ ದಾಖಲಾಗಿದೆ. ಜಿಲ್ಲೆಯ ಸೋಮವಾರಪೇಟೆ, ವೀರಾಜಪೇಟೆ ತಾಲೂಕು ವ್ಯಾಪಿಯಲ್ಲೂ  ಉತ್ತಮ ಮಳೆಯಾಗುತ್ತಿರುವ ಬಗ್ಗೆ ವರದಿಯಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ
July 8, 2026
10:56 PM
by: ದ ರೂರಲ್ ಮಿರರ್.ಕಾಂ
ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!
July 8, 2026
8:51 PM
by: ದ ರೂರಲ್ ಮಿರರ್.ಕಾಂ
ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ
July 8, 2026
4:18 PM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!
July 8, 2026
1:24 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror