ಮಡಿಕೇರಿ: ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದೆರಡು ದಿನಗಳಿಂದ ಮುಂಗಾರು ಚುರುಕುಗೊಂಡಿದ್ದು ಭಾರೀ ಮಳೆ ಸುರಿಯಿತು. ಎರಡು ದಿನಗಳಿಂದಲೂ ರೆಡ್ ಅಲರ್ಟ್ ಎಂದು ಘೋಷಿಸಿದ್ದ ಹವಾಮಾನ ಇಲಾಖೆ ಇನ್ನು ಅಪಾಯ ಕಡಿಮೆ ಎಂದು ಶನಿವಾರ ಸಂಜೆ ಹೇಳಿದೆ.
ಎರಡು ದಿನಗಳ ಕಾಲ ಸುರಿದ ಮಳೆಗೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಬರೆ ಕುಸಿತ ಉಂಟಾಗಿದೆ. ನಗರದ ರಾಜಾಸೀಟು ರಸ್ತೆಯ, ಎಸ್‍ಪಿ ವಸತಿ ಗೃಹದ ಸಮೀಪ ಅಲ್ಪ ಪ್ರಮಾಣದ ಬರೆ ಕುಸಿದಿದೆ. ಗುಡ್ಡದ ಮೇಲೆ ಮತ್ತು ಕೆಳಗೆ ಮನೆ ಕಟ್ಟಿಕೊಂಡು ವಾಸಿಸುತ್ತಿರುವ ನಿವಾಸಿಗಳಿಗೆ ಆತಂಕ ಮೂಡಿದೆ.
ವಿರಾಜಪೇಟೆ ತಾಲೂಕಿನ ತಿತಿಮತಿ ಬಳಿ ರಸ್ತೆಗೆ ಮರ ಬಿದ್ದು, ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸುಮಾರು ಮುಕ್ಕಾಲು ಗಂಟೆ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.
ದಿನಪೂರ್ತಿ ಸುರಿಯುತ್ತಿರುವ ಹದವಾದ ಮಳೆಯಿಂದಾಗಿ ಜಿಲ್ಲಾ ಕೇಂದ್ರ ಮಡಿಕೇರಿ ಸುತ್ತಮುತ್ತಲ ವ್ಯಾಪ್ತಿಯಲ್ಲಿ ಮೈ ಕೊರೆಯುವ ಚಳಿಯ ವಾತಾವರಣ ನಿರ್ಮಾಣವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಮಡಿಕೇರಿಯಲ್ಲಿ 1 ಇಂಚು ಮಳೆ ದಾಖಲಾಗಿದೆ. ಜಿಲ್ಲೆಯ ಸೋಮವಾರಪೇಟೆ, ವೀರಾಜಪೇಟೆ ತಾಲೂಕು ವ್ಯಾಪಿಯಲ್ಲೂ ಉತ್ತಮ ಮಳೆಯಾಗುತ್ತಿರುವ ಬಗ್ಗೆ ವರದಿಯಾಗಿದೆ.
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…