ಮಡಿಕೇರಿ :ಕೊಡಗಿನ ಬಹುತೇಕ ಕಡೆಗಳಲ್ಲಿ ಗುರುವಾರ ಮಧ್ಯಾಹ್ನದ ನಂತರ ನಿರಂತರವಾಗಿ ಮಳೆಯಾಗಿದೆ. ಆದ್ರಾ ಮಳೆಯ ಕೊನೆಯ ಪಾದದಲ್ಲಿ ಮಳೆ ಚುರುಕುಗೊಂಡಿದ್ದು, ಈ ವೇಗ ಪುನರ್ವಸುವಿಗೂ ವಿಸ್ತರಿಸಬಹುದೇ ಎನ್ನುವುದನ್ನು ಕಾದು ನೋಡಬೇಕಷ್ಟೆ.
ಬೆಳಗ್ಗಿನಿಂದಲೆ ಮಡಿಕೇರಿ ವ್ಯಾಪ್ತಿಯಲ್ಲಿ ದಟ್ಟ ಮಂಜು, ಆಗೊಮ್ಮೆ ಈಗೊಮ್ಮೆ ಸುರಿಯುತ್ತಿದ್ದ ಮಳೆ ಮುಂಗಾರು ಚೇತರಿಸಿಕೊಳ್ಳುತ್ತಿರುವ ಸೂಚನೆಯನ್ನು ನೀಡಿದೆ. ಮಧ್ಯಾಹ್ನದ ಬಳಿಕ ನಿರಂತರವಾಗಿ ಸಂಜೆಯವರೆಗೆ ಹದವಾಗಿ ಸುರಿಯುತ್ತಿದ್ದ ಮಳೆ ಮುಂಗಾರಿನ ವಾತಾವರಣಕ್ಕೆ ಕೈಚಾಚಿತು.
ಕಳೆದ ಸಾಲಿನಲ್ಲಿ ಇದೇ ಅವಧಿಗೆ 53.48 ಇಂಚು ಸರಾಸರಿ ಮಳೆ ಜಿಲ್ಲೆಯಲ್ಲಿ ಆಗಿತ್ತಾದರೆ, ಪ್ರಸಕ್ತ ಸಾಲಿನಲ್ಲಿ ಕೇವಲ 17.76 ಇಂಚು ಮಳೆಯಾಗಿದ್ದು, ಜಿಲ್ಲೆ ಬರದ ಹೊಸ್ತಿಲಿನಲ್ಲಿ ನಿಂತು ಬಿಟ್ಟಿದೆಯೋ ಎನ್ನುವ ಆತಂಕವನ್ನು ಹುಟ್ಟು ಹಾಕಿದೆ. ಇಂತಹ ಪರಿಸ್ಥಿತಿಯ ನಡುವೆ ಇಂದು ಸುರಿದ ಮಳೆ ಒಂದಷ್ಟು ನೆಮ್ಮದಿಯನ್ನು ಜಿಲ್ಲೆಯ ರೈತಾಪಿ ವರ್ಗದಲ್ಲಿ ಹಾಗೂ ಸಾರ್ವಜನಿಕರಲ್ಲಿ ಮೂಡಿಸಿದೆ.
ಕಾವೇರಿಯ ಉಗಮ ಸ್ಥಾನವಾದ ಭಾಗಮಂಡಲ, ತಲಕಾವೇರಿ ವಿಭಾಗಗಳಲ್ಲು ಇಲ್ಲಿಯವರೆಗೆ ಅಲ್ಪಸ್ವಲ್ಪ ಮಳೆಯಾಗಿದೆಯೇ ಹೊರತು, ವರ್ಷಂಪ್ರತಿ ಸುರಿಯುವ ಭಾರೀ ಮಳೆ ಕಂಡು ಬಂದಿಲ್ಲ. ಇದೇ ಪರಿಸ್ಥಿತಿ ಜಿಲ್ಲೆಯ ಕಾವೇರಿ ನದಿ ತಟದ ಎಲ್ಲಾ ಪ್ರದೇಶಗಳಲ್ಲು ಕಂಡು ಬಂದಿದೆಯಾದರೆ, ವೀರಾಜಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಜಿಲ್ಲೆಯ ಇತರೆ ಭಾಗಗಳಿಗಿಂತ ಒಂದಷ್ಟು ಉತ್ತಮ ಮಳೆಯಾಗಿದೆ.
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…