ಕೊಡಗಿನಲ್ಲಿ ಎಡೆಬಿಡದೆ ಮಳೆ : ರೆಡ್ ಅಲರ್ಟ್ ಘೋಷಣೆ : ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

September 4, 2019
10:51 PM

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೆ.5 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಗಳಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆ ಜಿಲ್ಲಾಡಳಿತ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮುಂಜಾಗೃತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜು ಹಾಗೂ ಅಂಗನವಾಡಿಗಳಿಗೆ ಸೆ.5 ರಂದು  ರಜೆ ಘೋಷಿಸಿ ಜಿಲ್ಲಾಧಿಕಾರಿಗಳು  ಆದೇಶಿಸಿದ್ದಾರೆ.

Advertisement

ಆಗಸ್ಟ್ ತಿಂಗಳಿನಲ್ಲಿ ಜಿಲ್ಲೆಯಲ್ಲಿ ಬಿದ್ದ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿ ಕೆಲವು ಪ್ರದೇಶಗಳಲ್ಲಿ ಭೂಕುಸಿತದಿಂದ ರಸ್ತೆ ಸಂಪರ್ಕಗಳು ಕಡಿತಗೊಂಡಿತ್ತು. ಜೀವಹಾನಿ, ಜಾನುವಾರು ಹಾನಿ ಸಂಭವಿಸಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಜಿಲ್ಲೆಯಲ್ಲಿ ಮತ್ತೆ ಮಳೆಯ ಪ್ರಮಾಣ ಏರಿಕೆಯಾಗುತ್ತಿರುವುದರಿಂದ ಸಾರ್ವಜನಿಕರು ಹಾಗೂ ಪ್ರವಾಸಿಗರು ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಮನವಿ ಮಾಡಿದೆ. ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ತುರ್ತು ಸೇವೆಗೆ ಟ್ರೋಲ್ ಫ್ರೀ ಸಂಖ್ಯೆ 24*7 ಕಂಟ್ರೋಲ್ ರೂಂ 08272-221077 ಹಾಗೂ ವ್ಯಾಟ್ಸ್ ಆಪ್ ನಂ. 8550001077 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಕಳೆದ ಮೂರು ದಿನಗಳಿಂದ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಸುರಿಯುತ್ತಿರುವ ಮಳೆ ಬುಧವಾರ ತೀವ್ರತೆಯನ್ನು ಪಡೆದುಕೊಂಡಿದೆ. ಜೀವನದಿ ಕಾವೇರಿ ಮತ್ತೆ ಉಕ್ಕಿ ಹರಿಯಲಾರಂಭಿಸಿದ್ದು, ತ್ರಿವೇಣಿ ಸಂಗಮ ಭರ್ತಿಯಾಗಿರುವುದರಿಂದ ಭಾಗಮಂಡಲವನ್ನು ಸಂಪರ್ಕಿಸುವ ರಸ್ತೆಗಳು ಜಲಾವೃತಗೊಂಡಿವೆ. ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ.

ನಾಪೋಕ್ಲುವಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಮೇಲೆ ಪ್ರವಾಹದ ನೀರು ಹರಿಯುತ್ತಿದ್ದು, ಸಂಪರ್ಕ ಕಡಿತಗೊಂಡಿದೆ. ಮಳೆಯ ತೀವ್ರತೆ ಇದೇ ರೀತಿ ಮುಂದುವರಿದಲ್ಲಿ ಭಾಗಮಂಡಲ ಮತ್ತೊಮ್ಮೆ ಸಂಪೂರ್ಣವಾಗಿ ಜಲಾವೃತಗೊಳ್ಳುವ ಆತಂಕ ಎದುರಾಗಿದೆ.ಕಾವೇರಿ ನದಿ ಪಾತ್ರದ ನಾಪೋಕ್ಲು, ಮೂರ್ನಾಡು ಬಲಮುರಿ, ಸಿದ್ದಾಪುರ ವಿಭಾಗಗಳಲ್ಲಿ, ವೀರಾಜಪೇಟೆ, ಬಾಳೆಲೆ ವ್ಯಾಪ್ತಿಯಲ್ಲಿ ಹಾಗೂ ಸೋಮವಾರಪೇಟೆ ತಾಲೂಕಿನಲ್ಲೂ ನಿರಂತರವಾಗಿ ಮಳೆಯಾಗುತ್ತಿದೆ.

ಎಡೆಬಿಡದೆ ಸುರಿಯುತ್ತಿರುವ ಗಾಳಿ, ಮಳೆಯಿಂದ ಜಿಲ್ಲೆಯಲ್ಲಿ ಮತ್ತೆ ಆತಂಕ ಸೃಷ್ಟಿಯಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಬಿದ್ದ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಮಡಿಕೇರಿ-ಮಂಗಳೂರು ಮುಖ್ಯ ರಸ್ತೆಯ ಜೋಡುಪಾಲದಲ್ಲಿ ಗುರುವಾರ ಬೆಳಗ್ಗೆ ಭಾರೀ ಗಾತ್ರದ ಮರ ಉರುಳಿ ಬಿದ್ದಿದೆ. ರಸ್ತೆಯ ಕೆಲವೆಡೆಗಳಲ್ಲಿ ಬರೆ ಕುಸಿತ ಸಂಭವಿಸಿ ವಾಹನ ಸಂಚಾರಕ್ಕೆ ತೊಡಕುಂಟಾಗಿತ್ತು. ಅಧಿಕಾರಿಗಳ ತಂಡ ಸ್ಥಳಕ್ಕೆ ಆಗಮಿಸಿ ಮರ ಮತ್ತು ಮಣ್ಣನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಲು ಕ್ರಮ ಕೈಗೊಂಡರು.

Advertisement

ಜಿಲ್ಲೆಯ ನದಿಪಾತ್ರ ಹಾಗೂ ಬೆಟ್ಟಗುಡ್ಡ ಪ್ರದೇಶ ವ್ಯಾಪ್ತಿಯ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮನವಿ ಮಾಡಿದ್ದಾರೆ. ಅತಿವೃಷ್ಟಿ ಸಂದರ್ಭ ಕರ್ತವ್ಯ ನಿರ್ವಹಿಸಿದ ಅಧಿಕಾರಿಗಳ ತಂಡ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಕಾರ್ಯೋನ್ಮುಖವಾಗಿದ್ದು, ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಅವರು ತಿಳಿಸಿದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!
July 11, 2025
7:33 AM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ
July 11, 2025
7:22 AM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ
July 11, 2025
7:14 AM
by: The Rural Mirror ಸುದ್ದಿಜಾಲ
ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ
July 11, 2025
7:11 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group