Advertisement
ಸುದ್ದಿಗಳು

ಕೊಡಗಿನಲ್ಲಿ ಕಡಿಮೆಯಾದ ಮಳೆ : ಸುಳ್ಯದಲ್ಲಿ ಭರ್ಜರಿ ಮಳೆ : ಕೇರಳದ 10 ಜಿಲ್ಲೆಗಳಲ್ಲಿ ರೆಡ್ ಎಲರ್ಟ್

Share

ಮಡಿಕೇರಿ/ಕಾಸರಗೋಡು/ಸುಳ್ಯ : ಕೊಡಗು ಜಿಲ್ಲೆಯಾದ್ಯಂತ ಈಗ ಸಾಧಾರಣ ಮಳೆಯಾಗುತ್ತಿದ್ದು, ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಸುಳ್ಯದಲ್ಲೂ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ.  ಸೋಮವಾರ ಬೆಳಗಿನಿಂದಲೇ  ಮಳೆಯಾಗುತ್ತಿದೆ.  ಕೇರಳದಲ್ಲಿ  ಕಾಸರಗೋಡು ಸೇರಿದಂತೆ 10 ಜಿಲ್ಲೆಗಳಲ್ಲಿ ರೆಡ್ ಎಲರ್ಟ್ ಘೋಷಣೆ ಮಾಡಲಾಗಿದೆ. 

ಮಡಿಕೇರಿಯಲ್ಲಿ  ಮಳೆ ಕಡಿಮೆಯಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು ನದಿ ನೀರು ರಸ್ತೆಯನ್ನು ಆವರಿಸಲು ಕೆಲವೇ ಅಡಿಗಳಷ್ಟೇ ಬಾಕಿ ಉಳಿದಿದ್ದು, ಅಧಿಕಾರಿಗಳು ಹಾಗೂ ರಕ್ಷಣಾ ಸಿಬ್ಬಂದಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕೊಡಗು, ಕೇರಳ ಗಡಿಭಾಗದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಪಕ್ಕದ ಭಾಗಮಂಡಲದ ನದಿಪಾತ್ರದಲ್ಲಿ ನೀರಿನ ಹರಿವು ಹೆಚ್ಚಾಗಿದೆ.

ಕೊಡಗು ಜಿಲ್ಲೆಯ ಇತರ ಭಾಗಗಳಲ್ಲಿ ಸಾಧಾರಣ ಮಳೆಯಾಗುತ್ತಿದೆಯಾದರೂ ನಿರಂತರ ಮಳೆ ಸುರಿಯುತ್ತಿರುವುದರಿಂದ ಕೆಲವು ಭಾಗಗಳಲ್ಲಿ ಬರೆ ಕುಸಿದ ಘಟನೆಗಳು ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಮಲೆತಿರಿಕೆ ಬೆಟ್ಟದಲ್ಲಿರುವ ಎರಡು ಮನೆಗಳ ತಡೆಗೋಡೆಗಳ ಮೇಲೆ ಬರೆ ಕುಸಿದಿದೆ. ಕಳೆದ ವರ್ಷ ಮಹಾಮಳೆಗೆ ಭಾರೀ ಅನಾಹುತಗಳನ್ನು ಎದುರಿಸಿದ್ದ ಜೋಡುಪಾಲದಲ್ಲೂ ಬರೆಗಳು ಕುಸಿದಿದ್ದು ಕಳೆದ ಮಳೆಗಾಲದಲ್ಲಿ ಹಾನಿಗೀಡಾಗಿದ್ದ ಮಡಿಕೇರಿ ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬೃಹತ್ ಬರೆ ಕುಸಿಯುತ್ತಲೇ ಇದ್ದು, ಇಂದೂ ಕೂಡ ಮಣ್ಣು ಕುಸಿದು ಬಿದ್ದಿದೆ.

 

ಕೇರಳದಲ್ಲಿ ರೆಡ್ ಹಾಗೂ ಆರೆಂಜ್ ಅಲರ್ಟ್ :

ಕಾಸರಗೋಡು ಸೇರಿದಂತೆ ಕಣ್ಣೂರು, ವಯನಾಡ್, ಕೋಝಿಕ್ಕೋಡ್, ಇಡುಕ್ಕಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ ಸೇರಿದಂತೆ 10 ಜಿಲ್ಲೆಗಳಲ್ಲಿ  ರೆಡ್  ಹಾಗೂ ಆರೆಂಜ್ ಎಲರ್ಟ್ ಘೊಷಣೆ ಮಾಡಲಾಗಿದೆ. ಹೀಗಾಗಿ ಕೆಲವು ಜಿಲ್ಲೆಗಳಲ್ಲಿ  ಶಾಲೆ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಕಳೆದ ಎರಡು ದಿನಗಳಿಂದ ಕೇರಳದ ವಿವಿಧ ಜಿಲ್ಲೆಗಳಲ್ಲಿ  ಭಾರೀ ಮಳೆಯಾಗುತ್ತಿದೆ.

 

ದಕ್ಷಿಣ ಕನ್ನಡದಲ್ಲೂ ಉತ್ತಮ ಮಳೆ:

ಮಂಗಳೂರು ಸೇರಿದಂತೆ ಜಿಲ್ಲೆಯ ವಿವಿದೆಡೆ ಉತ್ತಮ ಮಳೆಯಾಗಿದೆ. ಹವಾಮಾನ ಇಲಾಖೆಯ ವೆದರ್ ರಿಪೋರ್ಟ್ ಪ್ರಕಾರ ನಾಳೆ ಬೆಳ್ತಂಗಡಿ, ಕಾರ್ಕಳ, ಆಗುಂಬೆ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಡಿಕೇರಿ ಪ್ರದೇಶದಲ್ಲೂ ಹೆಚ್ಚಿನ ಮಳೆಯಾಗಲಿದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

1 day ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

2 days ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

3 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

3 days ago