ಮಡಿಕೇರಿ: ಕೊಡಗು ಜಿಲ್ಲಾಡಳಿತ ವತಿಯಿಂದ ನೆರೆ ಸಂತೃಸ್ತರಿಗಾಗಿ ಏರ್ಪಡಿಸಲಾಗಿರುವ ಮೂರು ದಿನಗಳ ಪರಿಹಾರ ಅದಾಲತ್‍ನಲ್ಲಿ ಎರಡನೇ ದಿನವಾದ ಮಂಗಳವಾರ ಕೂಡ ಸಂತ್ರಸ್ತರು ಪಾಲ್ಗೊಂಡು ತಮ್ಮ ಹೆಸರು ನೋಂದಾಯಿಸಿಕೊಂಡು ಸಮಸ್ಯೆಗಳ ಬಗ್ಗೆ ಮನವಿ ಮಾಡಿದರು.
ಬೆಳೆ ಹಾಗೂ ಮನೆ ಹಾನಿ ಮತ್ತಿತರ ಬಗ್ಗೆ ಪರಿಹಾರಕ್ಕಾಗಿ ಮನವಿ ಮಾಡಿದರು. ಪರಿಹಾರ ಅದಾಲತ್ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಪರಿಶೀಲಿಸಿದರು. ಪ್ರಕೃತಿ ವಿಕೋಪದಿಂದಾಗಿ ವಾಸದ ಮನೆ ಅಥವಾ ಬೆಳೆ ಹಾನಿ ಸಂಬಂಧಿಸಿದಂತೆ ಯಾವುದಾದರೂ ಕುಟುಂಬಕ್ಕೆ ಪರಿಹಾರ ನೀಡಲು ಬಿಟ್ಟು ಹೋಗಿದ್ದಲ್ಲಿ ಪರಿಹಾರ ಒದಗಿಸಲು ಪರಿಹಾರ ಅದಲಾತ್ ಹಮ್ಮಿಕೊಳ್ಳಲಾಗಿದ್ದು, ಮೇ, 29 ಕ್ಕೆ ಕೊನೆಗೊಳ್ಳಲಿದೆ.
ಮೇ 29 ರಂದು ನಗರದ ಜಿಲ್ಲಾಡಳಿತ ಭವನದ 2ನೇ ಮಹಡಿಯ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಪರಿಹಾರ ಅದಾಲತ್‍ಗೆ ಹಾಜರಾಗಿ ಸಮಸ್ಯೆ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ತಹಶೀಲ್ದಾರ್ ನಟೇಶ್, ಗೋವಿಂದರಾಜು ಮತ್ತಿತರರು ಹಾಜರಿದ್ದರು.
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…