ಮಡಿಕೇರಿ : ಕೊಡಗು ಜಿಲ್ಲೆಗೆ ಮತ್ತೆ ಮಳೆಯ ಆತಂಕ ಎದುರಾಗಿದೆ. ಮಳೆ ಹೋಯಿತು ಎಂದು ಸುಧಾರಿಸಿಕೊಳ್ಳುವ ಹೊತ್ತಿನಲ್ಲೇ ಸೆಪ್ಟಂಬರ್ ತಿಂಗಳ ಆರಂಭದಲ್ಲೇ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಅತಿಹೆಚ್ಚು ಮಳೆಯಾಗುವ ಭಾಗಮಂಡಲ ಹಾಗೂ ತಲಕಾವೇರಿಯಲ್ಲಿ ಸಾಧಾರಣ ಪ್ರಮಾಣದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ.
ಗುಡ್ಡ ಕುಸಿತದಿಂದ ಹತ್ತಕ್ಕೂ ಹೆಚ್ಚು ಮಂದಿಯನ್ನು ಬಲಿ ತೆಗೆದುಕೊಂಡ ವಿರಾಜಪೇಟೆ ತಾಲೂಕಿನಲ್ಲಿ ಮಳೆಯ ಪ್ರಮಾಣ ಹೆಚ್ಚೇ ಇದೆ. ಪಟ್ಟಣ ಪಂಚಾಯತ್ ವ್ಯಾಪ್ತಿಯ ಏಳನೇ ವಾರ್ಡ್‍ನ ತಡೆಗೋಡೆಯೊಂದು ಕುಸಿದು ಬಿದ್ದು, ಅಪಾಯದ ಪರಿಸ್ಥಿತಿ ಎದುರಾಗಿದೆ. ಸುಮಾರು ಹತ್ತಕ್ಕೂ ಹೆಚ್ಚು ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಸೋಮವಾರಪೇಟೆ ತಾಲೂಕಿನಲ್ಲೂ ಉತ್ತಮ ಮಳೆಯಾಗುತ್ತಿದೆ. ಮಡಿಕೇರಿ ತಾಲೂಕಿನಲ್ಲಿ ಸಾಧಾರಣ ರೀತಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಮಂಜಿನ ನಗರಿ ಮಡಿಕೇರಿಯಲ್ಲಿ ಮಂಜು, ಮಳೆಯೊಂದಿಗೆ ಮೈಕೊರೆಯುವ ಚಳಿಯೂ ಇದೆ.
ಜಿಲ್ಲೆಯ ನದಿ ಹಾಗೂ ಗುಡ್ಡ ಪ್ರದೇಶ ವ್ಯಾಪ್ತಿಯ ಜನರು ಮತ್ತೆ ಮಳೆಯಾಗುತ್ತಿರುವುದರಿಂದ ಆತಂಕಗೊಂಡಿದ್ದಾರೆ. ಪ್ರವಾಹ ಮತ್ತು ಗುಡ್ಡ ಕುಸಿತದಿಂದ ಬದುಕನ್ನೇ ಕಳೆದುಕೊಂಡ ಅನೇಕ ಕುಟುಂಬಗಳು ಇನ್ನೂ ಕೂಡ ಸಂಕಷ್ಟದಲ್ಲೇ ದಿನ ಕಳೆಯುತ್ತಿವೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?