ಮಡಿಕೇರಿ :ಕೊಡಗಿನಲ್ಲಿ ತಡವಾಗಿ ಆರಂಭಗೊಂಡ ಮಳೆ ಮೂರನೇ ದಿನ ಚುರುಕು ಪಡೆದುಕೊಂಡಿದೆ. ನೈರುತ್ಯ ಭಾಗಕ್ಕೆ ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶ ಮಾಡಿ ಜಿಲ್ಲೆಯಲ್ಲಿ ಎರಡನೇ ಅಥವಾ ಮೂರನೇ ವಾರದಲ್ಲಿ ಮುಂಗಾರು ತೀವ್ರತೆಯನ್ನು ಪಡೆದುಕೊಳ್ಳುವುದು ಸಾಮಾನ್ಯ.
ಜಿಲ್ಲಾ ಕೇಂದ್ರ ಮಡಿಕೇರಿ ಮಂಜಿನ ನಗರಿಯಾಗಿ ಬದಲಾಗಿದೆ, ಚಳಿಯೂ ಇದೆ. ಮುಂಗಾರು ಮಳೆಗೆ ಪ್ರತಿಯೊಬ್ಬರೂ ಕೊಡೆ, ಸ್ವೆಟರ್, ಗಂಬೂಟು, ಬಟ್ಟೆ ಒಣಗಲು ಬಳಂಜಿ ಹೀಗೆ ನಾನಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕಿದೆ. ಇನ್ನು ಮುಂದಿನ ನಾಲ್ಕು ತಿಂಗಳ ಕಾಲ ಮೋಡ ಕವಿದ ವಾತಾವರಣವನ್ನು ಕೊಡಗು ಜಿಲ್ಲೆಯಲ್ಲಿ ಕಾಣಬಹುದಾಗಿದೆ.
ಕಳೆದ ಬಾರಿಯ ತೀವ್ರ ಅತಿವೃಷ್ಟಿಯಿಂದಾಗಿ ಜಿಲ್ಲೆಯ ಜನರು ತುಂಬಾ ಸಂಕಷ್ಟ ಅನುಭವಿಸಿದ್ದರು. ಭತ್ತ, ಮುಸುಕಿನ ಜೋಳ, ಕಾಫಿ, ಏಲಕ್ಕಿ, ಕಾಳು ಮೆಣಸು, ಬಾಳೆ ಹೀಗೆ ನಾನಾ ಕೃಷಿ, ತೋಟಗಾರಿಕೆ ಹಾಗೂ ವಾಣಿಜ್ಯ ಬೆಳೆಗಳು ನಾಶವಾದವು. ಇದರಿಂದಾಗಿ ಜಿಲ್ಲೆಯ ಕೃಷಿಕರು ಚೇತರಿಸಿಕೊಳ್ಳುವುದೇ ಕಷ್ಟಸಾಧ್ಯವಾಗಿತ್ತು. ಸರ್ಕಾರ ಬೆಳೆ ಹಾನಿಗೆ ಪರಿಹಾರ ನೀಡಿದೆ. ಸಂತ್ರಸ್ತರಿಗೆ ಮನೆ ನಿರ್ಮಾಣ ಮಾಡುತ್ತಿದ್ದು ಸದ್ಯದಲ್ಲಿಯೇ ಮನೆ ಹಸ್ತಾಂತರ ಪ್ರಕ್ರಿಯೆ ನಡೆಯಲಿದೆ. ಆದರೂ ಕಳೆದ ಬಾರಿಯ ತೀವ್ರ ಅತಿವೃಷ್ಟಿಯಿಂದಾಗಿ ಒಂದು ರೀತಿ ಜಿಲ್ಲೆಯ ಜನರ ಬದುಕು ಅಸ್ತವ್ಯಸ್ತ ಉಂಟಾಗಿತ್ತು.
ಕಳೆದ ನಾಲ್ಕು ವರ್ಷದಲ್ಲಿ ಜನವರಿಯಿಂದ ಮೇ ಅಂತ್ಯದ ವರೆಗಿನ ವಾಡಿಕೆ ಮಳೆಯ ಪ್ರಮಾಣ ಅವಲೋಕನ ಮಾಡಿದಾಗ ಜಿಲ್ಲೆಯಲ್ಲಿ ಜನವರಿಯಿಂದ ಮೇ ಅಂತ್ಯದ ವರೆಗೆ ವಾಡಿಕೆ ಮಳೆಯ ಪ್ರಮಾಣವು 245.50 ಮಿ.ಮೀ.ಗಳಾಗಿದ್ದು, 2016 ರಲ್ಲಿ 158.20 ಮಿ.ಮೀ ಮಳೆಯಾಗಿದ್ದು, 2017 ರಲ್ಲಿ 305.04 ಮಿ.ಮೀ. ಮಳೆಯಾಗಿದ್ದು, 2018 ರ ಇದೇ ಅವಧಿಯಲ್ಲಿ 423.68 ಮಿ.ಮೀ. ಮಳೆಯಾಗಿದ್ದರೆ, 2019ರ ಇದೇ ಅವಧಿಯಲ್ಲಿ 146.92 ಮಿ.ಮೀ ಮಳೆಯಾಗಿರುವುದನ್ನು ಗಮನಿಸಬಹುದಾಗಿದೆ.
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490