Advertisement
ಸುದ್ದಿಗಳು

ಕೊಡಗಿನಲ್ಲಿ ಮಳೆ ಬಂದರೂ ಕೃಷಿಗೆ ಸಾಲುತ್ತಿಲ್ಲ : ರೈತಾಪಿ ವರ್ಗದಲ್ಲಿ ಆತಂಕ

Share

ಮಡಿಕೇರಿ : ಭಾರತೀಯ ಹವಾಮಾನ ಇಲಾಖೆ ಕಳೆದ ಒಂದು ತಿಂಗಳಿನಿಂದ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡುತ್ತಲೇ ಬಂದಿದೆಯಾದರು ಕೊಡಗು ಜಿಲ್ಲೆಗೆ ಮಾತ್ರ ನಿರೀಕ್ಷಿತ ಮಳೆಯಾಗುತ್ತಿಲ್ಲ.

ಜಿಲ್ಲೆಯಲ್ಲಿ ಬಿಸಿಲಿನ ವಾತಾವರಣ ಕಂಡು ಬಂದಿದ್ದು, ರೈತಾಪಿ ವರ್ಗ ಆತಂಕಗೊಂಡಿದೆ. ಮಳೆ ಬಂದರೂ ಒಮ್ಮೆಲೇ ಬಂದು ಅಪಾಯ ಸೃಷ್ಟಿಸಿ ಮರೆಯಾಗುತ್ತಿದೆ. ನಿರೀಕ್ಷಿತ ಪ್ರಮಾಣದಲ್ಲಿ ಹಾಗೂ ಪ್ರತೀವರ್ಷದಂತೆ ಮಳೆ ಸುರಿಯದ ಕಾರಣ ಈಗ ಕೃಷಿ ಉಳಿಸುವುದೇ ಚಿಂತೆಯಾಗಿದೆ.

ಕಳೆದ ವರ್ಷ ಮಹಾಮಳೆಯಿಂದ ನಲುಗಿದ್ದ ಕೊಡಗಿನಲ್ಲಿ ಜನವರಿ ತಿಂಗಳಿನಿಂದ ಜುಲೈ ಅಂತ್ಯದವರೆಗೆ ದಾಖಲೆಯ 3566.21 ಮಿ.ಮೀ. ಮಳೆಯಾಗಿತ್ತು. ಆದರೆ ಈ ಬಾರಿ ಜನವರಿಯಿಂದ ಇಲ್ಲಿಯವರೆಗೆ ಕೇವಲ 1255.80 ಮಿ.ಮೀ ಮಳೆಯಾಗಿದ್ದು, 80 ರಿಂದ 90 ಇಂಚು ಮಳೆ ಕೊರತೆಯಾಗಿದೆ. ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದ ರೈತರು ನಿರಾಶೆಗೊಂಡಿದ್ದು, ಇರುವಷ್ಟು ನೀರನ್ನು ಬಳಸಿಕೊಂಡು ನಾಟಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ವನ್ಯಜೀವಿಗಳ ದಾಳಿ ಮತ್ತು ಹವಾಗುಣದ ವೈಪರೀತ್ಯದಿಂದ ಬೇಸತ್ತು ಕೊಡಗಿನ ರೈತರು ಕೃಷಿ ಕ್ಷೇತ್ರದಿಂದ ದೂರ ಸರಿಯಲು ಆರಂಭಿಸಿದ್ದಾರೆ. ಇರುವ ಬೆರಳೆಣಿಕೆಯಷ್ಟು ಮಂದಿ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಸಕಾಲದಲ್ಲಿ ಮಳೆಯಾಗದೆ ಇರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಮಳೆಗಾಲದಲ್ಲಿ ನಾಟಿ ಮಾಡುವುದರಿಂದ ತೊಡಗಿ ಕಟಾವುವರೆಗೆ ನಿಗದಿತ ಪ್ರಮಾಣದಲ್ಲಿ ನಿಗದಿತ ಅವಧಿಯಲ್ಲೇ ಮಳೆಯಾದರೆ ಮಾತ್ರವೇ ಕೃಷಿ ಕಾರ್ಯ ಚೆನ್ನಾಗಿ ನಡೆಯುತ್ತದೆ. ಈ ಬಾರಿ ಒಮ್ಮೆಲೇ ಸುರಿವ ಭಾರೀ ಮಳೆ ಹಾಗೂ ಆ ನಂತರ ಬಿಸಿಲು ಕಂಡುಬರುತ್ತಿರುವುದು  ಕೃಷಿ ನಿರೀಕ್ಷೆಗಳೆಲ್ಲಾ ತಲೆಗೆಳಗೆ ಮಾಡುತ್ತಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

5 hours ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

6 hours ago

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

10 hours ago

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

19 hours ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

20 hours ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

1 day ago