ಕೊಡಗಿನ 4148 ಕುಟುಂಬಗಳಿಗೆ ತಾತ್ಕಾಲಿಕ ಪರಿಹಾರ ವಿತರಣೆ

August 24, 2019
1:30 PM

ಮಡಿಕೇರಿ : ಪ್ರಸಕ್ತ ಸಾಲಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಕೊಡಗು ಜಿಲ್ಲೆಯಲ್ಲಿ ಸಂತ್ರಸ್ತರಾಗಿರುವ 4,148 ಕುಟುಂಬಗಳಿಗೆ ದಿನಬಳಕೆ ಸಾಮಾಗ್ರಿಗಳನ್ನೊಳಗೊಂಡ ಆಹಾರದ ಕಿಟ್‍ಗಳೊಂದಿಗೆ 10 ಸಾವಿರ ರೂ.ಗಳ ಚೆಕ್‍ಗಳನ್ನು ವಿತರಿಸಲಾಗುತ್ತಿದ್ದು, ಆ.24ರೊಳಗೆ ಚೆಕ್ ವಿತರಣಾ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಪ್ರಸಕ್ತ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಸಂತ್ರಸ್ತರಿಗಾಗಿ ತೆರೆಯಲಾದ ಬಹುತೇಕ ಪರಿಹಾರ ಕೇಂದ್ರಗಳನ್ನು ಮುಚ್ಚಲಾಗುತ್ತಿದ್ದು, ವೀರಾಜಪೇಟೆ ತಾಲೂಕಿನ 4 ಕೇಂದ್ರಗಳಲ್ಲಿ 37ಕುಟುಂಬಗಳ 149 ಸದಸ್ಯರು ಆಶ್ರಯ ಪಡೆದಿದ್ದಾರೆ ಎಂದು ಅವರು ಹೇಳಿದ್ದಾರೆ.
ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಜನವರಿಯಿಂದ ಇದುವರೆಗೆ ನಡೆದ ಪ್ರಕೃತಿ ವಿಕೋಪದಲ್ಲಿ ಒಟ್ಟು 14 ಮಂದಿ ಸಾವಿಗೀಡಾಗಿದ್ದು, ನಾಲ್ಕು ಮಂದಿ ಕಣ್ಮರೆಯಾಗಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಸರಕಾರ ಪ್ರಕೃತಿ ವಿಕೋಪ ಮಾರ್ಗಸೂಚಿಯಂತೆ ಅತಿವೃಷ್ಟಿಯಿಂದ ಬಟ್ಟೆ ಮತ್ತು ದಿನಬಳಕೆಯ ವಸ್ತುಗಳನ್ನು ಕಳೆದುಕೊಂಡ ಕುಟುಂಬಕ್ಕೆ ತಲಾ 3,800 ರೂ.ಗಳಂತೆ ಪರಿಹಾರ ಪಾವತಿಸಲು ಅವಕಾಶವಿದ್ದು, ಇದೀಗ ಪ್ರಕೃತಿ ವಿಕೋಪ ಮಾರ್ಗಸೂಚಿಯಡಿ ಹೆಚ್ಚುವರಿಯಾಗಿ 6,200ರೂ.ಗಳನ್ನು ಸೇರಿಸಿ ನೀಡುವಂತೆ ರಾಜ್ಯ ಸರಕಾರ ಆದೇಶ  ನೀಡಿರುವ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ 10 ಸಾವಿರ ರೂ.ಗಳನ್ನು ನೀಡಲಾಗುತ್ತಿದೆ. ಅದರಂತೆ ಜಿಲ್ಲೆಯ ಮೂರು ತಾಲೂಕಿನ ಪರಿಹಾರ ಕೇಂದ್ರಗಳಲ್ಲಿದ್ದ ಮತ್ತು ಬಂಧುಗಳ ಮನೆ ಅಥವಾ ಇನ್ನಿತರ ಸ್ಥಳಗಳಲ್ಲಿ ಆಶ್ರಯ ಪಡೆದಿದ್ದ ಒಟ್ಟು 4,148 ಕುಟುಂಬಗಳಿಗೆ ತಲಾ 10 ಸಾವಿರ ರೂ.ಗಳ ಚೆಕ್ ವಿತರಿಸಲು ವಿಶೇಷ ಮಂಜೂರಾತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂದಿನ 7 ದಿನಗಳ ಉತ್ತಮ ಮಳೆ – ಹವಾಮಾನ ಇಲಾಖೆ
July 10, 2025
8:26 AM
by: ದ ರೂರಲ್ ಮಿರರ್.ಕಾಂ
ತೆಂಗು ಉತ್ಪಾದನೆ ಹೆಚ್ಚಿಸಲು‌ ಕೇರಳದಲ್ಲಿ ಪ್ಲಾನ್‌ | ಹೊಸ ಕೋರ್ಸ್‌ ಅಭಿವೃದ್ಧಿಪಡಿಸಲು ಚಿಂತನೆ |
July 10, 2025
8:18 AM
by: ದ ರೂರಲ್ ಮಿರರ್.ಕಾಂ
ಶ್ರಾವಣ ಮಾಸದಲ್ಲಿ ಮೊಸರನ್ನು ತಿನ್ನಬಾರದಂತೆ ಯಾಕೆ?
July 10, 2025
7:24 AM
by: ದ ರೂರಲ್ ಮಿರರ್.ಕಾಂ
ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ
July 9, 2025
10:27 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group