ಸುಳ್ಯ: ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ವ್ಯಾಪ್ತಿಯ ವಿರಾಜಪೇಟೆ ಮತ್ತು ಮಡಿಕೇರಿ ಕ್ಷೇತ್ರಗಳಲ್ಲಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಯ ಉಸ್ತುವಾರಿಗಳಾಗಿ ಕೆಪಿಸಿಸಿ ಮಾಜಿ ಕಾರ್ಯದರ್ಶಿಗಳಾದ ಟಿ.ಎಂ. ಶಹೀದ್ ಮತ್ತು ಎಂ. ವೆಂಕಪ್ಪ ಗೌಡ ನೇಮಕಗೊಂಡಿದ್ದಾರೆ.
ಕ್ಷೇತ್ರಕ್ಕೆ ಭೇಟಿ ನೀಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಿಧಾನಸಭೆ ಅಭ್ಯರ್ಥಿಗಳು ಹಾಗು ಡಿಸಿಸಿ, ಬಿಸಿಸಿ ಪದಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಸಂಪರ್ಕಿಸಿ ಅಭಿಪ್ರಾಯ ಕ್ರೋಢೀಕರಿಸಿ ಒಮ್ಮತದ ವ್ಯಕ್ತಿಗಳನ್ನು ಬ್ಲಾಕ್ ಅಧ್ಯಕ್ಷರಾಗಿ ನೇಮಿಸಲು ಶಿಫಾರಸ್ಸು ಮಾಡಲು ಕೆಪಿಸಿಸಿ ಇವರಿಗೆ ಸೂಚನೆ ನೀಡಿದೆ. ವಿರಾಜಪೇಟೆ ಕ್ಷೇತ್ರ ವ್ಯಾಪ್ತಿಯ ವಿರಾಜಪೇಟೆ, ಪೊನ್ನಂಪೇಟೆ ಹಾಗು ನಾಪೊಕ್ಲು ಬ್ಲಾಕ್ ಗಳ ಉಸ್ತುವಾರಿ ಟಿ.ಎಂ. ಶಹೀದ್ ಗೆ ಮತ್ತು ಮಡಿಕೇರಿ ಕ್ಷೇತ್ರದ ಬ್ಲಾಕ್ ಗಳ ಉಸ್ತುವಾರಿ ಎಂ. ವೆಂಕಪ್ಪ ಗೌಡರಿಗೆ ನೀಡಲಾಗಿದೆ.
ಕೊಡಗು ಜಿಲ್ಲೆಯ ಬ್ಲಾಕ್ ಸಮಿತಿ ಅಧ್ಯಕ್ಷರ ಬದಲಾವಣೆ ಮಾಡಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ಸ್ಥಳೀಯ ಮುಖಂಡರು ಮನವಿ ಮಾಡಿರುವ ಹಿನ್ನಲೆಯಲ್ಲಿ ಒಮ್ಮತದ ಅಭ್ಯರ್ಥಿಯ ಆಯ್ಕೆಗೆ ಉಸ್ತುವಾರಿಗಳನ್ನು ನೇಮಕ ಮಾಡಿ ಕೆಪಿಸಿಸಿ ಆದೇಶ ಮಾಡಿದೆ ಎಂದು ಟಿ.ಎಂ. ಶಹೀದ್ ತಿಳಿಸಿದ್ದಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…