ಮಡಿಕೇರಿ : ಕಳೆದ ವರ್ಷ ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಅನೇಕ ಮನೆಗಳ ಹಾನಿ ಮತ್ತು ಭೂಕುಸಿತ ಇತ್ಯಾದಿಗಳಿಂ ಫಸಲು ಕೊಳೆತು ಹೋಗಿ ಅಪಾರ ಬೆಳೆಹಾನಿ ಸಂಭವಿಸಿದ ಪ್ರಕರಣಗಳಲ್ಲಿ ಸರಕಾರವು ಆದ್ಯತೆ ಮೇರೆಗೆ ಪರಿಹಾರವನ್ನು ನೇರ ಪಾವತಿ ಮೂಲಕ ಸಂತ್ರ್ರಸ್ತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗಿತ್ತು. ಹಾಗಿದ್ದರೂ ಬಹಳಷ್ಟು ಸಾರ್ವಜನಿಕರು ಪರಿಹಾರ ಪಾವತಿಯಾಗದಿರುವ ಬಗ್ಗೆ ಪದೇ ಪದೇ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ವಿಚಾರಿಸುತ್ತಿದ್ದರಿಂದ ಇದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತವು ಈ ಸಮಸ್ಯೆಯನ್ನು ಪರಿಹರಿಸಲು ಮೇ 27 ರಿಂದ ಮೇ 29 ರವರೆಗೆ ಮೂರು ದಿನಗಳ ಕಾಲ ನಗರದ ಜಿಲ್ಲಾಡಳಿತ ಭವನದಲ್ಲಿ ಪರಿಹಾರ ಅದಾಲತ್‍ನ್ನು ಹಮ್ಮಿಕೊಳ್ಳಲಾಗಿತ್ತು.
ಈ ಪರಿಹಾರ ಅದಾಲತ್‍ಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸುಮಾರು 3,148 ಜನರು ಪರಿಹಾರ ಅದಾಲತ್‍ಗೆ ಬಂದು ತಮ್ಮ ಅಹವಾಲುಗಳನ್ನು ಸಲ್ಲಿಸಿದ್ದು, ಈ ಪೈಕಿ 1577 ಪ್ರಕರಣಗಳನ್ನು ಸ್ಥಳದಲ್ಲೇ ಇತ್ಯರ್ಥ ಪಡಿಸಲಾದ ಪ್ರಕರಣ ಹೊರತುಪಡಿಸಿ, ಒಟ್ಟು 1571 ಅರ್ಜಿ ಸ್ವೀಕರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…