ಕೊಡಗು -ಸಂಪಾಜೆ ಗ್ರಾಮದಲ್ಲಿ ತ್ಯಾಜ್ಯ ವಿಲೇವಾರಿ ಮತ್ತು ಸಾರ್ವಜನಿಕ ಸ್ಮಶಾನಕ್ಕೆ ಸ್ಥಳ ಗುರುತಿಸಲು ಕೆ.ಡಿ.ಪಿ ಸಭೆಯಲ್ಲಿ ತೀರ್ಮಾನ

November 16, 2019
11:33 AM

ಕೊಡಗು: ಸಂಪಾಜೆ ಗ್ರಾಮ ಪಂಚಾಯತ್ ನ ಗ್ರಾಮ ಮಟ್ಟದ ಕೆ.ಡಿ.ಪಿ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಮಾರ್ ಚೆದ್ಕಾರ್ ರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು.

Advertisement
Advertisement
Advertisement
Advertisement

ಸಭೆಯಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮೀಣ ರಸ್ತೆಯು ವಿಪರೀತ ಮಳೆಯಿಂದ ಹಾನಿಯಾಗಿದ್ದು ರಸ್ತೆಯನ್ನು ದುರಸ್ಥಿ ಮಾಡಲು ಅನುದಾನ ಪಡೆಯಲು ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಯಿತು ಹಾಗೂ ಕಂದಾಯ ಇಲಾಖೆಯವರು ಮಾಹಿತಿ ನೀಡಿ ಗ್ರಾಮಕ್ಕೆ ತ್ಯಾಜ್ಯ ವಿಲೇವಾರಿ ಮತ್ತು ಸಾರ್ವಜನಿಕ ಸ್ಮಶಾನಕ್ಕೆ ಸ್ಥಳಕ್ಕೆ ಕಂದಾಯ ಇಲಾಖೆ ಮತ್ತು ಗ್ರಾಮ ಪಂಚಾಯತ್ ಜಂಟಿಯಾಗಿ ಸ್ಥಳ ಗುರುತಿಸಲು ತೀರ್ಮಾನಿಸಲಾಯಿತು.

Advertisement

ಅರಣ್ಯ ಇಲಾಖೆ ಅಧಿಕಾರಿ ಮಾಹಿತಿ ನೀಡಿ ಕಾಡಾನೆ ಹಾವಳಿ ಮತ್ತು ಮಂಗಗಳ ಹಾವಳಿಯನ್ನು ತಡೆಯಲು ಇಲಾಖೆ ಮುಂದಿನ ದಿನಗಳಲ್ಲಿ ಆನೆ ಕಂದಕ ಮತ್ತು ಸೋಲಾರ್ ಬೇಲಿ ಅಳವಡಿಸುವ ಯೋಜನೆಯ ಬಗ್ಗೆ ವಿವರಿಸಿದರು. ಚೆಸ್ಕಾಂ ಇಲಾಖೆ ಅಧಿಕಾರಿ ಮಾಹಿತಿ ನೀಡಿ ಸೌಭಾಗ್ಯ ಯೋಜನೆಯಲ್ಲಿ ಗ್ರಾಮದ ಎಲ್ಲಾ ಮನೆಗೆ ಶೀಘ್ರದಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದೆಂದು ಮಾಹಿತಿ ನೀಡಿದರು. ಆರೋಗ್ಯ ಕೇಂದ್ರದಲ್ಲಿ 24×7 ಸೇವೆ ನೀಡಲು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಲು ಮನವಿ ಮಾಡಲಾಯಿತು. ಪೊಲೀಸ್ ಇಲಾಖಾಧಿಕಾರಿಯವರು ಮಾಹಿತಿ ನೀಡಿ ಸಂಪಾಜೆ ಗ್ರಾಮದಲ್ಲಿ ಅಕ್ರಮ ಮಧ್ಯ ಮಾರಾಟ, ಕಳ್ಳಭಟ್ಟಿ, ಗಾಂಜಾ ಹಾವಳಿ ಕಂಡು ಬಂದಲ್ಲಿ ಸಾರ್ವಜನಿಕರು ಮಾಹಿತಿ ನೀಡುವಂತೆ ಸಭೆಯಲ್ಲಿ ತಿಳಿಸಿದರು.

Advertisement

ಪಶು ವೈದ್ಯಾಧಿಕಾರಿಗಳು ಮಾಹಿತಿ ನೀಡಿ ಗೋವುಗಳಿಗೆ ಉಚಿತ ಜೀವ ವಿಮಾ ಯೋಜನೆ ಬಗ್ಗೆ ಮಾಹಿತಿ ನೀಡಿ ಯೋಜನೆಯ ಸದುಪಯೋಗವನ್ನು ಪಡೆಯುವಂತೆ ವಿನಂತಿ ಮಾಡಿದರು, ಕಾವೇರಿ ಗ್ರಾಮೀಣ ಬ್ಯಾಂಕಿನ ಅಧಿಕಾರಿಗಳು ಕೇಂದ್ರ ಸರಕಾರದ ವಿವಿಧ ವಿಮಾ ಯೋಜನೆಗಳಾದ ಜನ ಧನ್ ಯೋಜನೆ, ಅಟಲ್ ಪಿಂಚಣಿ ಯೋಜನೆ, ಜೀವನ್ ಸುರಕ್ಷಾ ಯೋಜನೆ, ಜೀವನ್ ಜ್ಯೋತಿ ಯೋಜನೆಯ ಬಗ್ಗೆ ಮಾಹಿತಿ ನೀಡಿ ಗ್ರಾಮಸ್ಥರು ಯೋಜನೆಯ ಸದುಪಯೋಗ ಪಡೆಯುವಂತೆ ಕೋರಿದರು.

Advertisement

ಸಭೆಯಲ್ಲಿ ವಿವಿಧ ಇಲಾಖೆಗಳಾದ ತೋಟಗಾರಿಕೆ, ಪಶು ವೈದ್ಯಕೀಯ, ಶಿಕ್ಷಣಾ, ಗ್ರಂಥಾಲಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ , ಕರ್ನಾಟಕ ಗ್ರಾಮೀಣ ಬ್ಯಾಂಕ್ ನ ಅಧಿಕಾರಿಗಳು ಪಾಲ್ಗೊಂಡು ತಮ್ಮ ತಮ್ಮ ಇಲಾಖೆ ಸಂಬಂದ ಪಟ್ಟಂತೆ ಮಾಹಿತಿಯನ್ನು ನೀಡಿದರು, ಕಾರ್ಯಕ್ರಮದ ವೇದಿಕೆಯಲ್ಲಿ ನೋಡೆಲ್ ಅಧಿಕಾರಿಗಳಾದ ತೋಟಗಾರಿಕೆ ಅಧಿಕಾರಿ ಡಾ// ವಿಜೇಶ್, ಮಡಿಕೇರಿ ತಾಲ್ಲೂಕು ಪಂಚಾಯತ್ ಸದಸ್ಯರಾದ ಶ್ರೀ ನಾಗೇಶ್ ಕುಂದಲ್ಪಾಡಿ , ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಸುಂದರ ಬಿಸಿಲುಮನೆ, ಅಭಿವೃದ್ಧಿ ಅಧಿಕಾರಿ ಶ್ರೀಮತಿ ಶೋಭಾರಾಣಿ ಹಾಗೂ ಪಂಚಾಯತ್ ನ ಚುನಾಯಿತ ಪ್ರತಿನಿಧಿಗಳು, ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು. ಸಭೆಯಲ್ಲಿ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಶೋಭಾರಾಣಿಯವರು ಗಣ್ಯರನ್ನು ಸ್ವಾಗತಿಸಿ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror