ಸುಳ್ಯ: ಕೊಡಗು ಸಂಪಾಜೆ ಗ್ರಾಮ ಪಂಚಾಯತ್ ವತಿಯಿಂದ ನಿರ್ಮಾಣಗೊಂಡ ನೂತನ ಸಭಾಭವನವನ್ನು ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ಶಾಸಕರು ನೆರವೇರಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಕುಮಾರ ಚಿದ್ಕಾರ್ ಅಧ್ಯಕ್ಷತೆ ವಹಿಸಿದ್ದರು. ಮಡಿಕೇರಿ ತಾ.ಪಂ. ಸದಸ್ಯ ನಾಗೇಶ್ ಕುಂದಲ್ಪಾಡಿ, ಪಯಸ್ವಿನಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎನ್.ಸಿ. ಅನಂತ, ಮಡಿಕೇರಿ ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಉಪಾಧ್ಯಾಯ, ಗ್ರಾ.ಪಂ. ಉಪಾಧ್ಯಕ್ಷ ಸುಂದರ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಶೋಭಾರಾಣಿ, ಗ್ರಾ.ಪಂ.ಸದಸ್ಯರುಗಳಾದ ರಮಾ ಬಾಲಚಂದ್ರ ಕಳಗಿ, ಕೃಷ್ಣ ಬಿ.ಕೆ, ಯಮುನ ಕಲ್ಯಾಳ, ರಾಜೇಶ್ವರಿ, ಗಿರಿಜ, ಮಾಲತಿ, ಪಯಸ್ವಿನಿ ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ರಾಜಾರಾಮ ಕಳಗಿ, ನಿರ್ದೇಶಕರಾದ ಬಿ.ಎ.ಗಣಪತಿ, ವಾಣಿ ಜಗದೀಶ್, ಕಿಶನ್ ಕಲ್ಯಾಳ, ಯಶವಂತ ದೇವರಗುಂಡ, ಮಾಜಿ ನಿರ್ದೇಶಕ ತೀರ್ಥಪ್ರಸಾದ್ ಕೊಯನಾಡು, ರಮಾನಂದ ಬಾಳಕಜೆ, ಎ.ಪಿ.ಎಂ.ಸಿ. ನಿರ್ದೇಶಕ ದೇವಪ್ಪ ಕೊಯನಾಡು, ಕೊಡಗು ಸಂಪಾಜೆ ಬಿಜೆಪಿ ಅಧ್ಯಕ್ಷ ಒ.ಆರ್. ಮಾಯಿಲಪ್ಪ, ಕೊಯನಾಡು ಗಣಪತಿ ದೇವಸ್ಥಾನದ ಅಧ್ಯಕ್ಷ ಕೆ. ಬಿ. ಉಲ್ಲಾಸ್, ಕೊಡಗು ಸಂಪಾಜೆ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ಶ್ರೀಧರ ಪಡ್ಪು ಮತ್ತಿತರರು ಉಪಸ್ಥಿತರಿದ್ದರು.
ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…