ಕಾಣಿಯೂರು: ರಕ್ತದಾನ ಮಾಡುವ ಮೂಲಕ ಎಷ್ಟೋ ಜೀವಗಳನ್ನು ಉಳಿಸಲು ಸಾಧ್ಯವಿದೆ. ರಕ್ತದಾನ ಮಾಡಿದರೆ ಮನಸ್ಸು ತೃಪ್ತಿ, ನೆಮ್ಮದಿಯಿಂದ ಇರುತ್ತದೆ. ರಕ್ತದಾನ ಮಾಡುವ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಸಂಘ ಸಂಸ್ಥೆಗಳು ಆದ್ಯತೆ ನೀಡಬೇಕಾಗಿದೆ ಎಂದು ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ ಹೇಳಿದರು.
ಅವರು ಕೊಡಿಮಾರು ಅಬೀರ ಗೆಳೆಯರ ಬಳಗದ ದಶವರ್ಷದ ಪ್ರಯುಕ್ತ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆ, ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಇದರ ಸಹಯೋಗದೊಂದಿಗೆ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಕೊಡಿಮಾರು ದೈವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಉದಯ ರೈ ಮಾದೋಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘಟನೆಗಳ ಮೂಲಕ ಸಮಾಜಮುಖಿ, ಮೌಲ್ಯಯುತವಾದ ಕೆಲಸಗಳಲ್ಲಿ ತೊಡಗಿಸಿಕೊಂಡಾಗ ದೇಶ ಅಭಿವೃದ್ಧಿಯತ್ತ ಸಾಗಲು ಸಾಧ್ಯವಿದೆ ಎಂದರು.
ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಇಲ್ಲಿಯ ವೈದ್ಯಾಧಿಕಾರಿ ಡಾ| ರಾಮಚಂದ್ರ ಭಟ್ ಮಾಹಿತಿ ನೀಡಿದರು. ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಆಂಗ್ಲ ಮಾಧ್ಯಮ ವಿಭಾಗದ ಮುಖ್ಯಗುರು ಗಿರಿಶಂಕರ ಸುಲಾಯ, ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಬೆಳಂದೂರು ‘ಬಿ’ ಒಕ್ಕೂಟದ ಅಧ್ಯಕ್ಷ ವೇಣುಗೋಪಾಲ ಕಳುವಾಜೆ ಶುಭಹಾರೈಸಿದರು. ಗೆಳೆಯರ ಬಳಗದ ಅಧ್ಯಕ್ಷ ಪ್ರಮೋದ್ ನೀರಜರಿ ಉಪಸ್ಥಿತರಿದ್ದರು.
ಗೆಳೆಯರ ಬಳಗದ ಗೌರವ ಸಲಹೆಗಾರರಾದ ಜಯಂತ ಅಬೀರ ಸ್ವಾಗತಿಸಿ, ವಸಂತ ರೈ ಕಾರ್ಕಳ ವಂದಿಸಿದರು. ಕಾರ್ಯದರ್ಶಿ ರಂಜಿತ್ ಹೊಸೊಕ್ಲು ವಂದಿಸಿದರು.
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…
ಹಾನಿಯಾದ ಮನೆ ಮತ್ತು ಬೆಳೆಗಳಿಗೆ ತ್ವರಿತವಾಗಿ ಪರಿಹಾರ ನೀಡಿ, ಯಾವುದೇ ಪ್ರಕರಣಗಳು ಬಾಕಿ…