ಕೊಡಿಯಾಲ: ಇಲ್ಲಿನ ಸ್ನೇಹಿತರ ಬಳಗ ಕಲ್ಪಡ ಮೂವಪ್ಪೆ ಇದರ ಆಶ್ರಯದಲ್ಲಿ 4ನೇ ವರ್ಷದ ಸಾಮೂಹಿಕ ಕ್ರೀಡಾಕೂಟವು ಮೂವಪ್ಪೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ನ.3ರ ರವಿವಾರ ನಡೆಯಲಿದೆ. ಕಾರ್ಯಕ್ರಮವನ್ನು ಬೆಳಿಗ್ಗೆ ರಾಮಚಂದ್ರ ಆಚಾರ್ಯ ಕಲ್ಪಡ ಮಾಲೆತ್ತಾರು ಉದ್ಘಾಟಿಸಲಿದ್ದು, ಕೊಡಿಯಾಲ ಗ್ರಾ.ಪಂ. ಅಧ್ಯಕ್ಷ ಮೋಹನ್ ಸಾಲಿಯಾನ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲ ಕಾಣಿಯೂರು ಇದರ ಗೌರವಾಧ್ಯಕ್ಷ ಕೃಷ್ಣಪ್ರಸಾದ್ ಭಟ್ ಕಟ್ಟತ್ತಾರು, ಕೊಡಿಯಾಲ ಗ್ರಾ.ಪಂ. ಸದಸ್ಯೆ ರಮಾ ಪಿ.ರೈ, ಮೂವಪ್ಪೆ ಶಾಲಾ ಮುಖ್ಯಗುರು ನಿರ್ಮಲ ಕೆ.ಎಸ್., ಕಲ್ಪಡ ಉಳ್ಳಾಕುಲು ದೈವಸ್ಥಾನದ ಮೊಕ್ತೇಸರ ಶಿವರಾಮ ಉಪಾಧ್ಯಾಯ, ಶಾಲಾ ಎಸ್ ಡಿಎಂಸಿ ಅಧ್ಯಕ್ಷ ವಿಠಲ ಗೌಡ ಭಾಗವಹಿಸಲಿದ್ದಾರೆ.
ಸಂಜೆ ನಡೆಯುವ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ನೇಹಿತರ ಬಳಗದ ಅಧ್ಯಕ್ಷ ಗಣೇಶ್ ಕಲ್ಪಡ ಅಂಗಾರಡ್ಕ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ರಾಷ್ಟ್ರಮಟ್ಟದ ಯುವಸಮ್ಮಾನ್ ಪ್ರಶಸ್ತಿ ವಿಜೇತ, ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಇದರ ಪ್ರಧಾನ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು, ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಗೌರವಾಧ್ಯಕ್ಷ ದಿಲೀಪ್ ಬಾಬ್ಲುಬೆಟ್ಟು, ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಗೌರವಾಧ್ಯಕ್ಷ ಚಿದಾನಂದ ಉಪಾಧ್ಯಾಯ ಕಲ್ಪಡ, ನಿವೃತ್ತ ಸೈನಿಕ ರವೀಂದ್ರ ಗೌಡ ರಾಮಕುಮೇರಿ, ಕೊಡಿಯಾಲ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷ ಆನಂದ ಗೌಡ, ಕೊಡಿಯಾಲ ಶಾರಾದೋತ್ಸವ ಸಮಿತಿ ಅಧ್ಯಕ್ಷ ವಿಜಯಚಂದ್ರ ಪೈ ಬಾಚೋಡಿ ಭಾಗವಹಿಸಲಿದ್ದಾರೆ.
ಸ್ಪರ್ಧೆಗಳ ವಿವರ: ಪುರುಷರಿಗೆ ಕಬಡ್ಡಿ, ವಾಲಿಬಾಲ್, ಹಗ್ಗಜಗ್ಗಾಟ, ಮಹಿಳೆಯರಿಗೆ ತ್ರೋಬಾಲ್, ಹಗ್ಗಜಗ್ಗಾಟ, ಮಕ್ಕಳಿಗೆ ಓಟ, ಚೆಂಡೆಸೆತ, ಕೆರೆದಡ, ಕಪ್ಪೆಜಿಗಿತ ಮುಂತಾದ ಸ್ಪರ್ಧೆಗಳು ನಡೆಯಲಿವೆ.
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…