ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 55,079 ಹೊಸ ಕೇಸ್ಗಳು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 16,38,871ಕ್ಕೆ ಏರಿಕೆಯಾಗಿದೆ. 24 ಗಂಟೆಯಲ್ಲಿ 779 ಬಲಿಯಾಗಿದ್ದಾರೆ. ಇದರಿಂದ ಇಲ್ಲಿಯವರೆಗೆ ಬಲಿಯಾದವರ ಸಂಖ್ಯೆ 33,425ಕ್ಕೆ ಬಂದು ನಿಂತಿದೆ.
Advertisement
ದೇಶದಲ್ಲಿ ಒಟ್ಟು 5,45,318 ಸಕ್ರಿಯ ಪ್ರಕರಣಗಳಿದ್ದು, 10,57,806 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
Advertisement
ಇನ್ನು ಕರ್ನಾಟಕದಲ್ಲಿ ನಿನ್ನೆ ಒಂದೇ ದಿನಕ್ಕೆ 6,128 ಕೊರೊನಾ ಸೋಂಕಿತ ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸಾವನ್ನಪ್ಪಿದ್ದವರು 83 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು 69,699 ಸಕ್ರಿಯ ಪ್ರಕರಣಗಳಿದ್ದು, 3,793 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement