ಬೆಂಗಳೂರು: ದೇಶದೆಲ್ಲೆಡೆ 170 ಜಿಲ್ಲೆಗಳನ್ನು ಕೊರೋನಾ ಹಾಟ್ ಸ್ಪಾಟ್ ಎಂದು ಕೇಂದ್ರ ಸರಕಾರ ಘೋಷಿಸಿದೆ. ಅದರಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರ್ನಾಟಕದ 8 ಜಿಲ್ಲೆಗಳು ಒಳಗೊಂಡಿದೆ.
ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡುಬಂದಿರುವ ಆಧಾರದಲ್ಲಿ ಕೇಂದ್ರ ಸರಕಾರ 3 ವಿಭಾಗ ಮಾಡಿದೆ. ಅದರಲ್ಲಿ ಹಾಟ್ ಸ್ಪಾಟ್, ನಾನ್ ಹಾಟ್ ಸ್ಪಾಟ್ ಮತ್ತು ಗ್ರೀನ್ ಎಂದು ವಿಭಜಿಸಿದೆ. ಇದರಂತೆ ದೇಶದ ಒಟ್ಟು 170 ಜಿಲ್ಲೆಗಳನ್ನು ಹಾಟ್ ಸ್ಪಾಟ್ ಎಂದು ಗುರುತಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಅದರಂತೆ ಕರ್ನಾಟಕದ ಬೆಂಗಳೂರು ಗ್ರಾಮಾಂತರ, ಮೈಸೂರು, ಬೆಳಗಾವಿ, ದಕ್ಷಿಣ ಕನ್ನಡ , ಬೀದರ್, ಕಲಬುರ್ಗಿ, , ಬಾಗಲಕೋಟೆ, ಧಾರವಾಡ ಜಿಲ್ಲೆಗಳೂ ಕೊರೊನಾ ಹಾಟ್ ಸ್ಪಾಟ್ ಜಿಲ್ಲೆಗಳಾಗಿವೆ. ಈ ಜಿಲ್ಲೆಗಳಲ್ಲಿ ನಿಗಾ ಹೆಚ್ಚಾಗಿರುತ್ತದೆ. ಇದುವರೆಗೆ ಯಾವುದೇ ಪಾಸಿಟಿವ್ ಪ್ರಕರಣಗಳು ವರದಿಯಾಗದ ಜಿಲ್ಲೆಗಳಲ್ಲಿ ಎ. 20ರ ನಂತರ ಲಾಕ್ಡೌನ್ ಸಡಿಲಗೊಳಿಸಲಾಗುವುದು ಎಂಬ ಮಾಹಿತಿ ಯನ್ನು ಆರೋಗ್ಯ ಇಲಾಖೆ ನೀಡಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…