ಮಂಗಳೂರು: ಶನಿವಾರವೂ ದ ಕ ಜಿಲ್ಲೆಗೆ ಶುಭ ಸುದ್ದಿ. ಶನಿವಾರ ದೊರೆತ 46 ಮಂದಿಯ ಕೊರೊನಾ ವೈರಸ್ ಸಂಬಂಧಿತ ಗಂಟಲ ದ್ರವದಲ್ಲಿ ಎಲ್ಲವೂ ನೆಗೆಟಿವ್ ಬಂದಿದೆ. ಇದೇ ವೇಳೆ ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ 10 ತಿಂಗಳ ಮಗುವು ಸಂಪೂರ್ಣ ಗುಣಮುಖವಾಗಿ ಶನಿವಾರ ಮನೆಗೆ ವಾಪಾಸ್ಸಾಗಿದೆ. ಅಲ್ಲದೇ, ಮಗುವಿನ ತಾಯಿ ಹಾಗೂ ಅಜ್ಜಿಯ ಪರೀಕ್ಷಾ ವರದಿಗಳು ನೆಗೆಟಿವ್ ಆಗಿದ್ದು, ಇವರೂ ಕೂಡಾ ಡಿಸ್ಚಾಜ್೯ ಆಗಿದ್ದಾರೆ.
ಕೊರೊನಾ ವೈರಸ್ ಪಾಸಿಟಿವ್ ಆಗಿದ್ದ ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ 10 ತಿಂಗಳ ಮಗುವು ಸಂಪೂರ್ಣ ಗುಣಮುಖವಾಗಿ, ಶನಿವಾರ ಆಸ್ಪತ್ರೆ ಯಿಂದ ಬಿಡುಗಡೆಗೊಂಡು ಮನೆಗೆ ತೆರಳಿದೆ. ಮಗುವಿನ ತಾಯಿ ಹಾಗೂ ಅಜ್ಜಿಯ ಪರೀಕ್ಷಾ ವರದಿಗಳು ನೆಗೆಟಿವ್ ಆಗಿರುತ್ತದೆ. ಇವರೂ ಕೂಡಾ ಡಿಸ್ಚಾಜ್೯ ಆಗಿರುತ್ತಾರೆ. ಇದುವರೆಗೆ ದ.ಕ. ಜಿಲ್ಲೆಯ 12 ಕೊರೊನಾ ಪಾಸಿಟಿವ್ ಪ್ರಕರಣಗಳಲ್ಲಿ 6 ಮಂದಿ ಗುಣಮುಖರಾಗಿ, ಬಿಡುಗಡೆಗೊಂಡಿದ್ದಾರೆ.
ಎ.5 ರಿಂದ 11 ರವರೆಗೆ ದ.ಕ. ಜಿಲ್ಲೆಯಲ್ಲಿ ಯಾವುದೇ ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಮಾಹಿತಿ ನೀಡಿದ್ದಾರೆ. ಶನಿವಾರ ಕೂಡಾ 52 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು ಇದುವರೆಗೆ ಒಟ್ಟು 38865 ಮಂದಿಯನ್ನು ತಪಾಸಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.