ಮಂಗಳೂರು: ಕೊರೊನಾ ವೈರಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಝೋನ್ ಹಾಗೂ ಉಡುಪಿ ಜಿಲ್ಲೆಯನ್ನು ಗ್ರೀನ್ ಝೋನ್ ಆಗಿ ಆರೋಗ್ಯ ಇಲಾಖೆ ಘೋಷಣೆ ಮಾಡಿದೆ. ಈ ಹಿಂದೆ ರೆಡ್ ಝೋನ್ ನಲ್ಲಿದ್ದ ದ.ಕ. ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣ ಇಳಿಕೆಯಾದ ಹಿನ್ನೆಲೆಯಲ್ಲಿ ಈಗ ಆರೆಂಜ್ ಝೋನ್ ಘೋಷಿಸಲಾಗಿದೆ.
ಆರೆಂಜ್ ಝೋನ್ ತೀರಾ ಅಪಾಯ ಅಲ್ಲದ ವಲಯವಾಗಿದೆ, ಹಸಿರು ವಲಯವು ಯಾವುದೇ ಅಪಾಯವಿಲ್ಲದೆ ಸೇಫ್ ಆಗಿರುತ್ತದೆ. ಈ ಝೋನ್ ಘೋಷಣೆಗೂ ಮುನ್ನ ತಾಲೂಕುವಾರು ಪ್ರಕರಣಗಳನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ತಾಲೂಕುವಾರು ಕೊರೊನಾ ಪಾಸಿಟಿವ್ ಪ್ರಕರಣ ಗಮನಿಸಿ ಹಸಿರುವಲಯವನ್ನಾಗಿ ಮಾಡಲಾಗುತ್ತದೆ. ಇನ್ನು ಕೊರೊನಾ ಪಾಸಿಟಿವ್ ಕಂಡುಬಂದ ಪ್ರದೇಶವನ್ನು ಸೀಲ್ ಮಾಡಲಾಗುತ್ತದೆ.
ರಾಜ್ಯದಲ್ಲಿ ಮೈಸೂರು, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೆಂಗಳೂರು ನಗರ ರೆಡ್ ಝೋನ್ ನಲ್ಲಿದೆ.
ಬೀದರ್, ಧಾರಾವಾಡ, ಬಳ್ಳಾರಿ, ದಕ್ಷಿಣ ಕನ್ನಡ, ಮಂಡ್ಯ ಆರೆಂಜ್ ಝೋನ್ ನಲ್ಲಿದೆ.
14 ಜಿಲ್ಲೆಗಳು ಗ್ರೀನ್ ಝೋನ್ ನಲ್ಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ರಾಮನಗರ, ಯಾದಗಿರಿ, ಕೊಪ್ಪಳ, ಹಾವೇರಿ, ರಾಯಚೂರು, ಹಾಸನ, ಚಾಮರಾಜನಗರ, ಕೋಲಾರ, ಉಡುಪಿ, ಕೊಡಗು, ದಾವಣಗೆರೆ, ಚಿತ್ರದುರ್ಗ ಗ್ರೀನ್ ಝೋನ್ ನಲ್ಲಿದೆ
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.