ಕೊರೊನಾ ವೈರಸ್ ಪಾಸಿಟಿವ್ ಆಗಿದ್ದ ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ 10 ತಿಂಗಳ ಮಗುವು ಸಂಪೂರ್ಣ ಗುಣಮುಖವಾಗಿ, ಶನಿವಾರ ಆಸ್ಪತ್ರೆ ಯಿಂದ ಬಿಡುಗಡೆಗೊಂಡು ಮನೆಗೆ ತೆರಳಿದೆ. ಮಗುವಿನ ತಾಯಿ ಹಾಗೂ ಅಜ್ಜಿಯ ಪರೀಕ್ಷಾ ವರದಿಗಳು ನೆಗೆಟಿವ್ ಆಗಿರುತ್ತದೆ. ಇವರೂ ಕೂಡಾ ಡಿಸ್ಚಾಜ್೯ ಆಗಿರುತ್ತಾರೆ. ಇದುವರೆಗೆ ದ.ಕ. ಜಿಲ್ಲೆಯ 12 ಕೊರೊನಾ ಪಾಸಿಟಿವ್ ಪ್ರಕರಣಗಳಲ್ಲಿ 6 ಮಂದಿ ಗುಣಮುಖರಾಗಿ, ಬಿಡುಗಡೆಗೊಂಡಿದ್ದಾರೆ.
ಎ.5 ರಿಂದ 11 ರವರೆಗೆ ದ.ಕ. ಜಿಲ್ಲೆಯಲ್ಲಿ ಯಾವುದೇ ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಮಾಹಿತಿ ನೀಡಿದ್ದಾರೆ. ಶನಿವಾರ ಕೂಡಾ 52 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು ಇದುವರೆಗೆ ಒಟ್ಟು 38865 ಮಂದಿಯನ್ನು ತಪಾಸಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.