ಬೆಂಗಳೂರು: ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿಸೋಮವಾರ ಮತ್ತೆ ಹೆಚ್ಚಳವಾಗಿದೆ. ಸೋಮವಾರ ಮಧ್ಯಾಹ್ನದ ವೇಳೆಗೆ 15 ಜನರಿಗೆ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 247ಕ್ಕೆ ಏರಿಕೆಯಾಗಿದೆ. ಇದರಲ್ಲಿ 59 ಮಂದಿ ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಮತ್ತೆ 15 ಮಂದಿಗೆ ಕೊರೊನಾ ವೈರಸ್ ತಗುಲಿರುವುದನ್ನು ತಿಳಿಸಿದೆ. 247 ಪ್ರಕರಣಗಳಲ್ಲಿ 59 ಮಂದಿ ಗುಣಮುಖರಾಗುವ ಮೂಲಕ ಇದೀಗ 182 ಮಂದಿಗೆ ರಾಜ್ಯದಲ್ಲಿ ಚಿಕಿತ್ಸೆ ನಡೆಯುತ್ತಿದೆ. 6 ಮಂದಿ ಮೃತಪಟ್ಟಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement


