ಬೆಂಗಳೂರು: ರಾಜ್ಯದಲ್ಲಿ ಸೋಮವಾರ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣದಲ್ಲಿ ಕೊಂಚ ನೆಮ್ಮದಿ ತಂದಿದೆ. ಕಳೆದ 12 ಗಂಟೆಯಲ್ಲಿ 10 ಪ್ರಕರಣ ಮಾತ್ರವೇ ಪಾಸಿಟಿವ್ ಬಂದಿದೆ. ಎರಡು ದಿನಕ್ಕೆ ಹೋಲಿಸಿದರೆ ಸೋಮವಾರ ಕಡಿಮೆ ಪ್ರಮಾಣದಲ್ಲಿ ಪಾಸಿಟಿವ್ ಪ್ರಕರಣ ಕಂಡುಬಂದಿದೆ.
ಸೋಮವಾರ ಬೆಳಗಿನವರೆಗೆ ಒಟ್ಟು ಸೋಂಕಿತರ ಸಂಖ್ಯೆ 858ಕ್ಕೆ ಏರಿಕೆ ಆಗಿದೆ. ಈ ಪೈಕಿ 31 ರೋಗಿಗಳು ಮೃತಪಟ್ಟಿದ್ದು, 422 ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಂಜೆಯ ವೇಳೆ ಮತ್ತೆ 4 ಪಾಸಿಟಿವ್ ಪ್ರಕರಣ ಪತ್ತೆಯಾಗುವ ಮೂಲಕ ರಾಜ್ಯದಲ್ಲಿ ಒಟ್ಟು 14 ಪಾಸಿಟಿವ್ ಪ್ರಕರಣ ಕಂಡುಬಂದಿದೆ.
ದೇಶದಲ್ಲಿ ಮಾತ್ರಾ ಒಂದೇ ದಿನ 4,213 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 67,152ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ. 67152 ಪೈಕಿ 20,917 ಮಂದಿ ಗುಣಮುಖರಾಗಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.