ನವದೆಹಲಿ: ಕೊರೋನಾ ವೈರಸ್ ಹರಡುವುದು ತಡೆಗೆ ದೇಶವನ್ನು ಲಾಕ್ ಡೌನ್ ಮಾಡಲಾಗಿದೆ. ಇದೀಗ ಜನರಿಗೆ ತೊಂದರೆಯಾಗದಂತೆ ದೇಶದ ನಾಗರಿಕರಿಗೆ ಕೇಂದ್ರ ಸರ್ಕಾರ 1.7 ಲಕ್ಷ ಕೋಟಿ ರೂ ಮೌಲ್ಯದ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ದೇಶದಲ್ಲಿ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ವೈರಸ್ ಅನ್ನು ನಿಯಂತ್ರಿಸುವ ಮತ್ತು ಸೋಂಕು ಬಾದಿತ ಜನರಿಗೆ ಪರಿಹಾರ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಇಂದು 1.7 ಲಕ್ಷ ಕೋಟಿ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿದೆ ಎಂದರು.
ಇದರಲ್ಲಿ ಪ್ರಮುಖವಾಗಿ ವೈದ್ಯಕೀಯ ಸಿಬಂದಿಗಳಿಗೆ, ಕೆಲಸ ಮಾಡುವ ಮಂದಿಗೆ 50 ಲಕ್ಷ ವಿಮೆ , ಬಡವರಿಗೆ ಮುಂದಿನ 3 ತಿಂಗಳಿಗೆ ಅಕ್ಕಿ ಹಾಗೂ ಗೋಧಿ ಉಚಿತವಾಗಿ ವಿತರಣೆ, ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯ ಮೊದಲ ಕಂತು ತಕ್ಷಣ ಬಿಡುಗಡೆ , 2000 ರೂಪಾಯಿ ಉದ್ಯೋಗ ಖಾತ್ರಿ ಕಾರ್ಮಿಕರಿಗೆ ತಕ್ಷಣ ನೀಡುವುದು, ವೃದ್ಧರಿಗೆ 1000 ಸಹಾಯ ಧನ ಪಿಂಚಣಿ ಹೆಚ್ಚುವರಿ ಹಾಗೂ 8.3 ಕೋಟಿ ಮಂದಿಗೆ ಉಜ್ವಲ ಗ್ಯಾಸ್ ಯೋಜನೆ ಉಚಿತವಾಗಿ ಗ್ಯಾಸ್ ವಿತರಣೆ ಸೇರಿದೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…