ಮಂಗಳೂರು: ಕೊರೊನಾ ವೈರಸ್ ಬಗ್ಗೆ ದ.ಕ. ಜಿಲ್ಲೆಯಲ್ಲಿ ಬುಧವಾರ 7 ಪರೀಕ್ಷಾ ವರದಿಗಳು ಲಭ್ಯವಾಗಿದೆ. ಈ ಎಲ್ಲಾ ಪರೀಕ್ಷಾ ವರದಿಗಳು ನೆಗೆಟಿವ್ ಆಗಿವೆ. ಈ ಮೂಲಕ ಸತತ 4 ನೇ ದಿನವೂ ದ ಕ ಜಿಲ್ಲೆಯಲ್ಲಿ ಕೊರೊನಾ ವೈರಸ್ ನೆಗೆಟಿವ್ ವರದಿಗಳು ಬಂದಿವೆ.
ಈ ಬಗ್ಗೆ ಮಾಹಿತಿ ನೀಡಿದ ದ.ಕ. ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ , ಬುಧವಾರ ಹೊಸದಾಗಿ 9 ಮಂದಿಯ ಗಂಟಲ ದ್ರವದ ಮಾದರಿಯನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಪಡೆದುಕೊಳ್ಳಲಾಗಿದೆ. 15 ಮಂದಿಯನ್ನು ನಿಗಾದಲ್ಲಿರಿಸಲಾಗಿದೆ. ಬುಧವಾರದಂದು 20 ಮಂದಿಯನ್ನು ಸ್ಕ್ರೀನಿಂಗ್ ಗೆ ಒಳಪಡಿಸಲಾಗಿದೆ. 3635 ಮಂದಿ ಮನೆಯಲ್ಲೇ ಕ್ವಾರಂಟೈನ್ ನಲ್ಲಿದ್ದಾರೆ. 11 ಮಂದಿ ಇ ಎಸ್ ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿದ್ದಾರೆ. ಇನ್ನು 2311 ಮಂದಿ 28 ದಿನಗಳ ಕ್ವಾರಂಟೈನ್ ಪೂರೈಸಿದ್ದಾರೆ ಎಂದು ವಿವರ ನೀಡಿದರು. ಇದುವರೆಗೆ ಒಟ್ಟು 38701 ಮಂದಿಯನ್ನು ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ. 3635 ಮಂದಿ ಹೋಂ ಕ್ವಾರಂಟೈನ್‌ನಲ್ಲಿ ಇದ್ದಾರೆ. ಒಟ್ಟು 2311 ಮಂದಿ 28 ದಿನಗಳ ಹೋಂ ಕ್ವಾರಂಟೈನ್ ಅವಧಿಯನ್ನು ಬುಧವಾರ ಪೂರೈಸಿದ್ದು, ಅವರಲ್ಲಿ ಕೊರೋನಾದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ ಎಂದು ಜಿಲ್ಲಾಧಿಕಾರಿ ವಿವರಿಸಿದ್ದಾರೆ.
ಇದೇ ವೇಳೆ ಉಡುಪಿ ಜಿಲ್ಲೆಯಲ್ಲೂ ಕೊರೊನಾ ವೈರಸ್ ನೆಗೆಟಿವ್ ವರದಿ ಬಂದಿದೆ.
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…