ಸುಳ್ಯ: ತಾಲೂಕಿನಲ್ಲಿ ಇದುವರೆಗೆ ಯಾವುದೇ ಕೊರೊನಾ ವೈರಸ್ ಸೋಂಕು ಇರುವುದು ಪತ್ತೆಯಾಗಿಲ್ಲ. ಆದರೆ ಇದೇ ರೀತಿಯಾಗಿ ಮುಂಜಾಗ್ರತಾ ಕ್ರಮಗಳು ಇನ್ನೂ 15 ದಿನಗಳ ಕಾಲ ಅಗತ್ಯವಿದೆ. ಅನಗತ್ಯವಾಗಿ ಸುಳ್ಳು ಸುದ್ದಿ ಹಾಗು ವದಂತಿ ಹಬ್ಬಿಸಬೇಡಿ. ಭಯದ ಬದಲಾಗಿ ಜಾಗೃತಿ ಇರಲಿ ಎಂದು ಆರೋಗ್ಯ ಇಲಾಖೆ ಹಾಗೂ ತಾಲೂಕು ಆಡಳಿತ ಹೇಳಿದೆ.
ವಿದೇಶದಿಂದ ಬಂದವರನ್ನು ಈಗಾಗಲೆ ಕ್ವಾರಂಟೇನ್ ನಲ್ಲಿ ಇರಲು ಸೂಚಿಸಿದೆ. ವಿದೇಶದಿಂದ ಬಂದು ಅನಾರೋಗ್ಯಕ್ಕೆ ಒಳಗಾದವರ ರಕ್ತದ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. ಇದುವರಗೆ ಕೊರೊನಾ ವೈರಸ್ ಪಾಸಿಟಿವ್ ಬರಲಿಲ್ಲ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ತಾಲೂಕಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಇದೇ ರೀತಿ ಮುಂದುವರಿಸಿಕೊಂಡು ಕಡ್ಡಾಯವಾಗಿ ಹೊಗಬೇಕಿದೆ. ವಿದೇಶದಿಂದ ಹಾಗೂ ಹೊರಜಿಲ್ಲೆಗಳಿಂದ ಬಂದವರಿಗೆ ಯಾರಿಗಾದರೂ ಜ್ವರ, ಶೀತ, ಕಫ ಇದ್ದರೆ ತಕ್ಷಣವೇ ಸಮೀಪದ ಆಸ್ಪತ್ರೆಗೆ ಯಾವುದೇ ಭಯವಿಲ್ಲದೆ ಭೇಟಿ ನೀಡಬೇಕಿದೆ. ಸ್ಥಳೀಯರು ಈ ಬಗ್ಗೆ ನಿಗಾ ಇಡಬೇಕಿದೆ.
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…