ಕೊರೊನಾ ಲಾಕ್ಡೌನ್ | ಅಂಚೆ ಇಲಾಖೆ ಮೂಲಕ ವಿವಿಧ ಸೌಲಭ್ಯ | ಔಷಧಿ ರವಾನೆಗೂ ಸಿದ್ಧವಾಗಿದೆ ಅಂಚೆ ಇಲಾಖೆ |

April 15, 2020
10:17 PM

ಮಂಗಳೂರು :ಕೊರೊನಾ ವೈರಸ್ ಮುನ್ನೆಚ್ಚರಿಕಾ ಕ್ರಮವಾಗಿ ಲಾಕ್ಡೌನ್ ಅವಧಿಯಲ್ಲಿ ಅಂಚೆ ಇಲಾಖೆಯು ಅಗತ್ಯ ಸೇವೆಗಳನ್ನು ನೀಡುತ್ತಿದೆ. ಮಂಗಳೂರು ವಿಭಾಗದಲ್ಲಿ ಎಲ್ಲಾ ಇಲಾಖಾ ಮತ್ತು ಶಾಖಾ  ಅಂಚೆ ಕಚೇರಿಗಳು ಈಗಾಗಲೇ ಈ ನಿಟ್ಟಿನಲ್ಲಿ ಕಾರ್ಯಾರಂಭಿಸಿವೆ.

Advertisement

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಯಾವುದೇ ಊರಿನಿಂದ ಯಾವುದೇ ಊರಿಗೆ ಅಂಚೆ ಮೂಲಕ ಔಷಧ ಮತ್ತು ತುರ್ತು ಅಗತ್ಯದ ವಸ್ತುಗಳನ್ನು ರವಾನಿಸಬಹುದಾಗಿದೆ. ಸಮೀಪದ ಜಿಲ್ಲೆಗಳಾದ ಶಿವಮೊಗ್ಗ, ಮೈಸೂರು, ಕೊಡಗು  ಹಾಗೂ ಚಿಕ್ಕಮಗಳೂರು ಇತ್ಯಾದಿ ಊರುಗಳಿಗೆ ಕೂಡ ಔಷಧ ಮತ್ತು ಅಗತ್ಯ ವಸ್ತುಗಳನ್ನು ಕ್ಷಿಪ್ರವಾಗಿ ತಲುಪಿಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ.

ನೆರೆಯ ಹಾಗೂ ಇತರ ರಾಜ್ಯಗಳಿಗೆ ಮಂಗಳೂರಿನಿಂದ ನೇರ ಸಾಗಾಣಿಕೆ ಇಲ್ಲದಿರುವುದರಿಂದ ಮಂಗಳೂರಿನಿಂದ ಬೆಂಗಳೂರು ಮೂಲಕ ಕಳುಹಿಸಲಾಗುತ್ತಿದೆ. ಇದರಿಂದ ವಿಳಂಬವಾಗುವ ಸಾಧ್ಯತೆ ಇದೆ. ಇವುಗಳನ್ನು ರವಾನಿಸುವಾಗ ಅಂಚೆ ಕಚೇರಿಗೆ  ತುರ್ತು ಅಗತ್ಯದ ಬಗ್ಗೆ ತಿಳಿಸಿದರೆ, ಶೀಘ್ರ ರವಾನೆ ಹಾಗೂ ಬಟವಾಡೆಯ ವ್ಯವಸ್ಥೆಗಳನ್ನು ಮಾಡಲು ಸಹಾಯಕವಾಗುತ್ತದೆ.

ತಂತ್ರಜ್ಞಾನ ಆಧಾರಿತ ಇ ಮನಿಯಾರ್ಡರ್ ಸೇವೆ: ಲಾಕ್ಡೌನ್ ಅವಧಿಯಲ್ಲಿ ಕುಟುಂಬಿಕರಿಗೆ ಹಣ ಕಳಿಸುವ ಅಗತ್ಯತೆಗಳು ಎಲ್ಲರಿಗೂ ಬರಬಹುದು.  ಇದಕ್ಕಾಗಿ ಅಂಚೆ ಕಚೇರಿಯಲ್ಲಿ ವಿಶೇಷವಾದ ಇ ಮನಿಯಾರ್ಡರ್ ಸೇವೆ ಲಭ್ಯವಿದೆ. ಸಾರಿಗೆ ಸಂಪರ್ಕ ವ್ಯವಸ್ಥೆ ಇಲ್ಲದಿರುವುದು ಈ ಸೇವೆಯ ಮೇಲೆ ಪರಿಣಾಮ ಬೀರುವುದಿಲ್ಲ. ಇಲೆಕ್ಟ್ರಾನಿಕ್  ತಂತ್ರಜ್ಞಾನದ ಮೂಲಕ ಪಿನ್ ಕೋಡ್ ಆಧಾರಿತವಾಗಿ ಕಳುಹಿಸುವ ವ್ಯವಸ್ಥೆ ಇರುವುದರಿಂದ ದೇಶದ ಯಾವುದೇ ಭಾಗಕ್ಕೂ ಇ  ಮನಿಯಾರ್ಡರ್  ಮೂಲಕ ಹಣವನ್ನು ಸಾರ್ವಜನಿಕರು ಅಂಚೆಕಚೇರಿಗಳಿಂದ ಕಳುಹಿಸಬಹುದಾಗಿದೆ.

ಸಾಮಾಜಿಕ ಭದ್ರತೆ ಯೋಜನೆಗಳ ಹಣ ಪಾವತಿ : ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಲ್ಲಿ ಈ-ಮನಿಯಾರ್ಡರ್ ಹಾಗೂ ಅಂಚೆ ಉಳಿತಾಯ ಖಾತೆಗಳ ಮೂಲಕ ಸಂಬಂಧಿಸಿದ ಫಲಾನುಭವಿಗಳಿಗೆ ಹಣವು ಅಂಚೆ ಕಛೇರಿಗಳಲ್ಲಿ ಪಾವತಿಯಾಗುತ್ತಿದ್ದು, ಕಳೆದ ಒಂದು ವಾರದಲ್ಲಿ ಸುಮಾರು 5500 ಫಲಾನುಭವಿಗಳಿಗೆ ಇ ಮನಿಯಾರ್ಡರ್ ಗಳನ್ನು ಮಂಗಳೂರು ವಿಭಾಗದಲ್ಲಿ ವಿತರಿಸಲಾಗಿದೆ. ಇನ್ನೂ ಸುಮಾರು 24,0000 ಫಲಾನುಭವಿಗಳಿಗೆ ಈ ವಾರದಲ್ಲಿ ಇ ಮನಿಯಾರ್ಡರ್ ಗಳನ್ನು ಪಾವತಿಸಲಾಗುತ್ತಿದೆ.

ವಿದ್ಯುತ್ ಬಿಲ್ ಪಾವತಿ : ಮಂಗಳೂರು ಅಂಚೆ ವಿಭಾಗದ ಎಲ್ಲಾ ಇಲಾಖಾ ಮತ್ತು ಶಾಖಾ  ಅಂಚೆ ಕಚೇರಿಗಳಲ್ಲಿ ವಿದ್ಯುತ್ ಬಿಲ್ ಪಾವತಿ ಸೇವೆ ಲಭ್ಯವಿದ್ದು, ಗ್ರಾಹಕರು ಈ ಸೇವೆಯ ಸದುಪಯೋಗ ಪಡೆದುಕೊಳ್ಳಬಹುದು. ಲಾಕ್ ಡೌನ್ ಅವಧಿಯಲ್ಲಿ ಮೆಸ್ಕಾಂ ಬಿಲ್ ಬಾರದಿದ್ದರೂ ಕೂಡ ಗ್ರಾಹಕರು ತಮ್ಮ ಆರ್.ಆರ್. ನಂಬರ್ ಹಾಗೂ ಮೆಸ್ಕಾಂ ಸಬ್ ಡಿವಿಷನ್ ಮಾಹಿತಿಯನ್ನು ಅಂಚೆ ಕಚೇರಿಯಲ್ಲಿ ನೀಡಿ ವಿದ್ಯುತ್ ಬಿಲ್ ಪಾವತಿ ಮಾಡಬಹುದಾಗಿದೆ.

ಮೊಬೈಲ್ ಮತ್ತು ಡಿ.ಟಿ.ಎಚ್ ರೀಚಾರ್ಜ್ : ಲಾಕ್ಡೌನ್ ಅವಧಿಯಲ್ಲಿ ಹೆಚ್ಚಿನ ಅಂಗಡಿಗಳು ಮುಚ್ಚಿರುವುದರಿಂದ ಮೊಬೈಲ್/ಡಿ.ಟಿ.ಎಚ್ ರೀಚಾರ್ಜ್ ಸೌಲಭ್ಯಗಳು ಕೂಡ ಅಂಚೆ ಕಚೇರಿಯಲ್ಲಿ ಲಭ್ಯವಿದೆ. ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಖಾತೆಯ ಮೂಲಕ ಗ್ರಾಹಕರು ತಮ್ಮ ಸಮೀಪದ ಅಂಚೆ ಕಚೇರಿಯಲ್ಲಿ ಮೊಬೈಲ್/ಡಿ.ಟಿ.ಎಚ್ ರೀಚಾರ್ಜ್ ನ್ನು ಮಾಡಬಹುದಾಗಿದೆ. ಅಲ್ಲದೆ ಮೊಬೈಲ್ ಬ್ಯಾಂಕಿಂಗ್ ಮೂಲಕ ಮನೆಯಲ್ಲೇ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.

ವ್ಯವಹಾರದ ಸಂದರ್ಭದಲ್ಲಿ ಸಾರ್ವಜನಿಕರು ಅಂಚೆ ಕಚೇರಿಯಲ್ಲಿ ನೂಕು ನುಗ್ಗಲು ಉಂಟಾಗದಂತೆ ಹಾಗೂ ಕೊರೊನಾ ಮುನ್ನೆಚ್ಚರಿಕೆ ಕ್ರಮವಾಗಿ ಸಾಮಾಜಿಕ ಅಂತರ ಕಾಯ್ದು ಕೊಳ್ಳಬೇಕು. ಎಲ್ಲಾ ಅಂಚೆ ಕಚೇರಿಗಳಲ್ಲೂ ಸದ್ಯಕ್ಕೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಮಾತ್ರ ಅಗತ್ಯ  ಅಂಚೆ ಸೇವೆ ನೀಡಲಾಗುತ್ತಿದೆ. ಸಾರ್ವಜನಿಕರಿಗೆ ಮತ್ತು ವಿವಿಧ ಸಾಮಾಜಿಕ ಭದ್ರತಾ  ಯೋಜನೆಯ ಫಲಾನುಭವಿಗಳಿಗೆ ಯಾವುದೇ ತೊಂದರೆ ಆಗದಂತೆ ಇಲಾಖೆ ಎಲ್ಲಾ ರೀತಿಯ ಕಾಳಜಿ ವಹಿಸುತ್ತಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಇಲಾಖೆಗೆ ಸಹಕರಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಮಂಗಳುರು ವಿಭಾಗೀಯ ಕಚೇರಿಯ ವಾಟ್ಸಾಪ್ ಸಂಖ್ಯೆ   9448291072ಗೆ ಸಂದೇಶ  ಕಳುಹಿಸಬಹುದಾಗಿದೆ ಎಂದು ಹಿರಿಯ ಅಂಚೆ ಅಧೀಕ್ಷಕರು, ಮಂಗಳೂರು ವಿಭಾಗ  ಇವರ ಪ್ರಕಟಣೆ ತಿಳಿಸಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |
April 28, 2025
10:21 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 28-04-2025 | ಇಂದು ಅಲ್ಲಲ್ಲಿ ಗುಡುಗು ಸಹಿತ ಮಳೆ | ಮೇ 1ರಿಂದ ಮಳೆ ಹೆಚ್ಚಾಗುವ ಲಕ್ಷಣ
April 28, 2025
2:22 PM
by: ಸಾಯಿಶೇಖರ್ ಕರಿಕಳ
ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ
April 28, 2025
7:02 AM
by: The Rural Mirror ಸುದ್ದಿಜಾಲ
“ದ ಹಿಂದೂ ಮ್ಯಾನಿಫ್ಯಾಸ್ಟೋ” ಕೃತಿ ಬಿಡುಗಡೆ | ಅಹಿಂಸೆಯೇ ಭಾರತದ ನೈಜ ಧರ್ಮ-ಮೋಹನ್ ಭಾಗವತ್
April 28, 2025
6:53 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group