ಮಂಗಳೂರು: ಎರಡು ದಿನಗಳ ಕಾಲ ದ ಕ ಜಿಲ್ಲೆ ಸಂಪೂರ್ಣ ಬಂದ್ ಮಾಡಿದ ಬಳಿಕ ಮಂಗಳವಾರ ದಿನಸಿ ಹಾಗೂ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಿದ ಬೆನ್ನಿಗೇ ಜನರು ಮುಗಿ ಬಿದ್ದು ಖರೀದಿಯಲ್ಲಿ ತೊಡಗಿಸಿದರು. ಇದೀಗ ಪರಿಸ್ಥಿತಿ ಗಮನಿಸಿ ಬುಧವಾರದಿಂದ ದ.ಕ. ಜಿಲ್ಲೆಯಲ್ಲಿ ಎಲ್ಲಾ ಅಗತ್ಯ ವಸ್ತುಗಳು ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆಯ ತನಕ ಪ್ರತಿನಿತ್ಯ ಅಗತ್ಯ ಸಾಮಾಗ್ರಿಗಳು ಲಭ್ಯವಾಗಲಿದೆ. ಆದರೆ ಸಾಮಾಜಿಕ ಅಂತರ ಹಾಗೂ ಮುಂಜಾಗ್ರತೆಗಳು ಎಂದಿನಂತೆ ಕಡ್ಡಾಯವಾಗಿ ಇರಲಿದೆ.
ಮಂಗಳವಾರದ ಪರಿಸ್ಥಿತಿ ಗಮನಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬುಧವಾರದಿಂದ ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆಯ ತನಕ ಪ್ರತಿನಿತ್ಯ ಅಗತ್ಯ ಸಾಮಾಗ್ರಿಗಳು ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ. ಅಗತ್ಯ ವಸ್ತುಗಳಾದ ದಿನಸಿ, ಹಾಲು, ಮೆಡಿಕಲ್, ಗ್ಯಾಸ್, ಪೆಟ್ರೋಲ್, ಬ್ಯಾಂಕ್ ಸೇರಿದಂತೆ ವೈದ್ಯಕೀಯ ಸೇವೆ ಲಭ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…