ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಮಾ.28 ರಂದು ವಾಣಿಜ್ಯ ವ್ಯವಹಾರಗಳನ್ನು ಸಂಪೂರ್ಣ ಸ್ಥಗಿತಗೊಳಿಸಲಾಗುವುದು ಎಂದು ಜಿಲ್ಲಾದಿಕಾರಿಗಳ ಪ್ರಕಟಣೆ ತಿಳಿಸಿದೆ.
ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಈಗಾಗಲೇ 7 ಕೊರೊನಾ ವೈರಸ್ ಸೋಂಕಿತರ ಪ್ರಕರಣ ಪತ್ತೆಯಾಗಿದೆ. ನೆರೆಯ ಕಾಸರಗೋಡು, ಉತ್ತರಕನ್ನಡ ಜಿಲ್ಲೆಯಲ್ಲೂ ಪಾಸಿಟಿವ್ ಪ್ರಕರಣ ಏರಿಕೆಯಾಗುತ್ತಿದೆ. ಜಿಲ್ಲೆಯಲ್ಲಿ ಸಾರ್ವಜನಿಕ ಓಡಾಟ ನಿರ್ಬಂಧಿಸಿದೇ ಇದ್ದರೆ ಮುಂದಿನ ದಿನ ಇನ್ನಷ್ಟು ಅಪಾಯಕಾರಿಯಾಗಿದೆ. ಜನರ ಉತ್ತಮ ಭವಿಷ್ಯಕ್ಕಾಗಿ ಕೈಗೊಳ್ಳುವ ಈ ನಿರ್ಧಾರವನ್ನು ಎಲ್ಲರೂ ಬೆಂಬಲಿಸಬೇಕು. ಸಾರ್ವಜನಿಕರ ಆರೋಗ್ಯದ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಅನಿವಾರ್ಯವಾಗಿದೆ. ಪ್ರತಿಯಿಬ್ಬರೂ ಮನೆಯಲ್ಲಿ ಕೂತು ಸಾಮಾಜಿಕ ಅಂತರ ಕಾಪಾಡಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಪ್ರಧಾನಿಗಳು, ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ದಕ ಜಿಲ್ಲೆಯಲ್ಲಿ ನಾಳೆಯಿಂದ ಎಲ್ಲಾ ಚಟುವಟಿಕೆ ವಾಣಿಜ್ಯ ವ್ಯವಹಾರಗಳನ್ನು , ಅಂಗಡಿಗಳನ್ನು ಸಂಪೂರ್ಣ ಬಂದ್ ಮಾಡಲಾಗುವುದು ಎಂದು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಜಿ್ಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಸಭೆಯಲ್ಲಿ ಸಂಸದರು, ಶಾಸಕರು, ಜಿಪಂ ಅಧ್ಯಕ್ಷರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಅಡಿಕೆಯಂತಹ ಕ್ಯಾನ್ಸರ್ ಉಂಟುಮಾಡುವ ಏಜೆಂಟ್ಗಳ ನಿಯಂತ್ರಣಕ್ಕೆ ನೀತಿಗಳು ಮತ್ತು ಮಾರ್ಗದರ್ಶನದ ಕೊರತೆಯಿದೆ ಎಂದು…
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…