ನವದೆಹಲಿ: ಕೊರೊನಾ ವೈರಸ್ ಹರಡುವುದು ತಡೆಯಲಿ ಈಗ ಲಾಕ್ ಡೌನ್ ನ್ನು ಪಾಲಿಸದಿದ್ದರೆ ಕೊರೋನಾ ವೈರಸ್ ವಿರುದ್ಧ ಬಚಾವಾಗಲು, ಅಪಾಯದಿಂದ ರಕ್ಷಿಸಿಕೊಳ್ಳಲು ಕಷ್ಟವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಈಗಿನ ಪರಿಸ್ಥಿತಿಯಲ್ಲಿ ಕೊರೋನಾ ವೈರಸ್ ವಿರುದ್ಧ ಹೋರಾಟ ಮಾಡುವುದೆಂದರೆ ಸಾವು, ಬದುಕಿನ ನಡುವೆ ನಡೆಸುತ್ತಿರುವ ಹೋರಾಟ, ಹೀಗಾಗಿ ಸಂಪೂರ್ಣ ಬಂದ್ ಅನಿವಾರ್ಯವಾಗಿದೆ. ಈ ಸಂದರ್ಭದಲ್ಲಿ ಯಾರು ಕೂಡ ಕಾನೂನನ್ನು ಬೇಕೆಂದೇ ದುರುದ್ದೇಶಪೂರ್ವಕವಾಗಿ ಮುರಿಯಲು ನೋಡುವುದಿಲ್ಲ, ಆದರೂ ಕೆಲವರು ನಿಯಮ ಮುರಿಯಲು ನೋಡುತ್ತಿದ್ದಾರೆ. ದಯವಿಟ್ಟು ಈ ಕೆಲಸ ಮಾಡಬೇಡಿ ಎಂದ ಪ್ರಧಾನಿ ಈ ರೀತಿಯ ಕಠಿಣ ನಿರ್ಧಾರ ತೆಗೆದುಕೊಂಡಿದ್ದಕ್ಕೆ ಕ್ಷಮೆ ಕೇಳುತ್ತೇನೆ. ಬಡವರಿಗೆ ನನ್ನ ಮೇಲೆ ಕೋಪ ಬಂದಿದೆ. ಏಕೆ ಈ ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ. ಕೊರೊನಾ ವೈರಸ್ ವಿರುದ್ಧ ಹೋರಾಡಲು ಬೇರೆ ದಾರಿಯೇ ಇರಲಿಲ್ಲ. ಆದರೆ, ಬೇರೆ ದೇಶಗಳ ಸ್ಥಿತಿ ನೋಡಿದಾಗ ಈ ರೀತಿಯ ಕ್ರಮ ಸರಿ ಎನ್ನಿಸುತ್ತದೆ. ಭಾರತೀಯರ ಸುರಕ್ಷತೆ ನಮಗೆ ಮುಖ್ಯವಾಗಿದೆ ಎಂದರು.
ಸಾಕಷ್ಟು ಜನರು ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿದ್ದಾರೆ. ವೈದ್ಯರು, ನರ್ಸ್ಗಳು ಮತ್ತು ಔಷಧಾಲಯದವರು ಕೊರೊನಾ ತಡೆಯಲು ಪ್ರಯತ್ನಿಸುತ್ತಿದ್ದಾರೆ. ಇವರು ಮೊದಲ ಸಾಲಿನ ಸೈನಿಕರು ಎಂದು ಅಭಿನಂದಿಸಿದರು.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…