ಸುಳ್ಯ: ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಪ್ರದೇಶದಲ್ಲಿ ಕೊರೊನಾ ವೈರಸ್ ಸೋಂಕು ಪಾಸಿಟಿವ್ ಪ್ರಕರಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಾ.28 – ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೆಡಿಕಲ್ ಹಾಗೂ ವೈದ್ಯಕೀಯ ಸೇವೆ ಹೊರತುಪಡಿಸಿ ಎಲ್ಲವೂ ಸ್ತಬ್ಧವಾಗಲಿದೆ. ದಿನಸಿ ಖರೀದಿಗೂ ಇಂದು ಅವಕಾಶ ಇಲ್ಲ.
ಇಂದು ಜನ ಪೇಟೆಗೆ ಬಂದರೆ ಪೊಲೀಸರು ಲಾಠಿ ಬೀಸುತ್ತಾರೆ. ಯಾವುದೇ ಕಾರಣಕ್ಕೂ ಯಾರೊಬ್ಬರೂ ರಸ್ತೆಗೆ ಇಳಿಯಬಾರದು ಎಂದು ಖಡಕ್ ಸೂಚನೆ ಜಿಲ್ಲಾಡಳಿತ ನೀಡಿದೆ. ಜಿಲ್ಲೆಯ ಜನರ ಆರೋಗ್ಯದ ಕಾರಣದಿಂದ ಈ ಕ್ರಮ ಅನಿವಾರ್ಯವಾಗಿ ತೆಗೆದುಕೊಳ್ಳಲಾಗಿದೆ. ಇಷ್ಟೂ ಮೀರಿ ರಸ್ತೆಗೆ ಬಂದರೆ ಪೊಲೀಸ್ ಲಾಠಿ ಏಟು ತಿನ್ನಲು ಇಂದು ಸಜ್ಜಾಗಿ.
ಸುಳ್ಯ ತಾಲೂಕಿನ ವಿವಿದೆಡೆ ಬೆಳಗ್ಗೆ 5.30 ರಿಂದಲೇ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ಸುಳ್ಯ ತಾಲೂಕಿನ ಬಳ್ಪದಲ್ಲಿ ಜನ ಸೇರಿದ್ದು ಪೊಲೀಸರು ಲಾಠಿ ಬೀಸಿದ್ದಾರೆ. ಯಾವುದೇ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಹಾಲು ಖರೀದಿಗೆ ಇಂದು ಅವಕಾಶ ಇಲ್ಲ.
ಅಡಿಕೆಯಂತಹ ಕ್ಯಾನ್ಸರ್ ಉಂಟುಮಾಡುವ ಏಜೆಂಟ್‌ಗಳ ನಿಯಂತ್ರಣಕ್ಕೆ ನೀತಿಗಳು ಮತ್ತು ಮಾರ್ಗದರ್ಶನದ ಕೊರತೆಯಿದೆ ಎಂದು…
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…