ಸುದ್ದಿಗಳು

ಕೊರೊನಾ ವೈರಸ್ ಇಫೆಕ್ಟ್ | ಹಾಲು ಮಾರಾಟದಲ್ಲಿ ವ್ಯತ್ಯಯ | ವಿಪರೀತ ದಾಸ್ತಾನು | ಮಾ.30 ರವರೆಗೆ ಹಾಲು ಸಂಗ್ರಹ ಸ್ಥಗಿತ | ಮಾರಾಟ ಯಥಾಸ್ಥಿತಿ | ಕೆ ಎಂ ಎಫ್ ಹೇಳಿಕೆ|

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು ಮಾ.22 ರಿಂದ ದ ಕ ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡುವುದು  ತಡೆಯಲು ಕರ್ಫ್ಯೂ ಇರುವುದರಿಂದ  ಪ್ರತಿ ನಿತ್ಯ 1  ಲಕ್ಷ ಲೀಟರ್ ಹಾಲು ಮಾರಾಟ ಕಡಿಮೆಯಾಗಿದೆ. ಹಾಲನ್ನು ಪರಿವರ್ತನಾ ಘಟಕಗಳಿಗೆ ಕಳುಹಿಸಿದ್ದು, ಅಲ್ಲಿಯೂ ಸಹ ಸಾಮರ್ಥ್ಯ  ಮೀರಿ ಹಾಲಿನ ದಾಸ್ತಾನು ಇರುವುದರಿಂದ ತಕ್ಷಣ ಪರಿವರ್ತನೆ ಮಾಡಲು ಸಾಧ್ಯವಾಗಿರುವುದಿಲ್ಲ.  ಆದುದರಿಂದ ಒಕ್ಕೂಟವು ಸಂಘಗಳಿಂದ ಹಾಲನ್ನು ಸ್ವೀಕರಿಸಿ ದಾಸ್ತಾನಿಡಲು ಸಾಧ್ಯವಾಗುತ್ತಿಲ್ಲ.ಹೀಗಾಗಿ ಪರಿಸ್ಥಿತಿಯನ್ನು ನಿಯಂತ್ರಿಸುವ ಸಲುವಾಗಿ ಮಾ.29 ಹಾಗೂ 30 ರಂದು ಹಾಲು ಸಂಗ್ರಹಣೆಯನ್ನು ಸ್ಥಗಿತಗೊಳಿಸಲಾಗಿದೆ. ಆದರೆ, ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ನಿತ್ಯದಂತೆ ಮುಂದುವರಿಯಲಿದೆ ಎಂದು ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷ  ರವಿರಾಜ ಹೆಗ್ಡೆ ಪತ್ರಿಕಾ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

Advertisement

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋವಿಡ್ 19 ವೈರಸ್ ಹರಡುವ ಭೀತಿಯಿಂದ ಜನರು ಜೀವ ಭಯದಿಂದ ದಿನದೂಡುವಂತಾಗಿದೆ. ಇಂತಹ  ಪರಿಸ್ಥಿತಿಯಲ್ಲಿಯೂ  ನಂದಿನಿ ಬಳಗದ ಎಲ್ಲರೂ ಗ್ರಾಹಕರಿಗೆ ಹಾಲು ಪೂರೈಸುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿದ್ದಾರೆ. ಮಾ.27 ರಿಂದ  ಮಾಧ್ಯಮಗಳಲ್ಲಿ ಅಗತ್ಯ ಸೇವೆ ಒಳಗೊಂಡು ದಕ್ಷಿಣ ಕನ್ನಡ ಜಿಲ್ಲೆಯು ಸಂಪೂರ್ಣ ಬಂದ್ ಎಂದು ವರದಿ ಬಿತ್ತರವಾದ ಹಾಗೂ ಪೋಲಿಸ್ ಇಲಾಖೆಯಿಂದ ಅಂಗಡಿ ಮುಂಗಟ್ಟುಗಳನ್ನು ಕಟ್ಟುನಿಟ್ಟಾಗಿ ತೆರೆಯದಂತೆ ಆದೇಶಿಸಿದ ಹಿನ್ನೆಲೆಯಲ್ಲಿ ನಮ್ಮ ಡೀಲರುಗಳ ಹಾಲು ಮಾರಾಟಕ್ಕೆ ತೊಂದರೆಯಾಗಿ ಮಾ.28 ರಂದು ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಸಂಪೂರ್ಣ ಸ್ಥಗಿತಗೊಂಡಿರುತ್ತದೆ.

ಈ ಸಂದರ್ಭದಲ್ಲಿ ಮಾನ್ಯ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಡಳಿತವನ್ನು ಒಕ್ಕೂಟದ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು ಸಂಪರ್ಕಿಸಿ ಪರಿಸ್ಥಿತಿ ವಿವರಿಸಿ ಮಾ.29  ರಿಂದ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ನಿಗದಿತ ಸಮಯದಲ್ಲಿ ಮಾರಾಟ ಮಾಡಲು ಅವಕಾಶ ಕಲ್ಪಿಸಿರುತ್ತಾರೆ.

ಆದರೆ ಈಗಾಗಲೇ ಹಾಲು ದಾಸ್ತಾನು ಇರುವುದರಿಂದ ಪ್ರಸ್ತುತದ ಪರಿಸ್ಥಿತಿಯನ್ನು ನಿಯಂತ್ರಿಸುವ ಸಲುವಾಗಿ ಅನಿವಾರ್ಯವಾಗಿ ಮಾ.29 ಹಾಗೂ 30 ರಂದು ಹಾಲು ಸಂಗ್ರಹಣೆಯನ್ನು ಸ್ಥಗಿತಗೊಳಿಸಲಾಗಿದೆ. ಹೈನುಗಾರರು ಸಹಕರಿಸುವಂತೆ ರವಿರಾಜ ಹೆಗ್ಡೆಯವರು ಮನವಿ ಮಾಡಿದ್ದಾರೆ.

Advertisement

ಮಾ.31 ರಿಂದ ಗುಣಮಟ್ಟದ ಹಾಲು ಸಂಗ್ರಹಣೆ ಪುನ:ರಾರಂಭಗೊಳ್ಳಲಿದೆ ಎಂದು ತಿಳಿಸಿದ್ದಾರೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

32 minutes ago

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

2 hours ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

1 day ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago

ಹವಾಮಾನ ವರದಿ | 09-08-2025 | ಬಂಗಾಳಕೊಲ್ಲಿಯ ವಾಯುಭಾರ ಕುಸಿತ- ಮುಂಗಾರು ಚುರುಕು |

ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…

2 days ago

ಹೊಸರುಚಿ | ಹಲಸಿನ ಹಣ್ಣಿನ ಹಲ್ವ

ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು :  ಹಲಸಿನ ಹಣ್ಣು 1 ಕಪ್. ಜಾರ್…

2 days ago