ಕೊರೊನಾ ವೈರಸ್ ಎದುರಿಸಲು ಸಜ್ಜಾದ ರಾಜ್ಯ ಸರಕಾರ | 1700 ಬೆಡ್ ಆಸ್ಪತ್ರೆ ಕೋವಿಡ್ -19 ಕೇರ್ ಸೆಂಟರ್ ಗೆ | 24*7 ಕರ್ತವ್ಯ ನಿರತ ಸಿಬಂದಿಗಳ ವ್ಯವಸ್ಥೆ|

March 22, 2020
1:33 PM

ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು  ತಡೆಗಟ್ಟುವುದು  ಹಾಗೂ ನಿಯಂತ್ರಣಕ್ಕೆ, ಚಿಕಿತ್ಸೆಗೆ ಬೇಕಾದ ವ್ಯವಸ್ಥೆಯನ್ನು ರಾಜ್ಯ ಸರಕಾರ ಕೈಗೊಳ್ಳುತ್ತಿದೆ. ಇದೀಗ 1700 ಬೆಡ್ ಆಸ್ಪತ್ರೆಯನ್ನು ವಿಶೇಷವಾಗಿ (ಕೊರೊನಾ) ಕೋವಿಡ್ -19 ಕೇರ್ ಹಬ್‌ ಆಗಿ ಪರಿವರ್ತನೆ ಮಾಡಲಾಗುತ್ತಿದೆ.  ಅದರ ಜೊತೆಗೆ 24*7  ಕರ್ತವ್ಯದಲ್ಲಿರುವ ಸಿಬಂದಿಗಳು ಹಾಗೂ ಸೀಎಂ ನೇತೃತ್ವದಲ್ಲಿಯೇ ಗಮನಿಸುವ ತಂಡ ವ್ಯವಸ್ಥೆ ಮಾಡಲಾಗಿದೆ.

ಮಾ.22 ರಂದು ಬೆಳಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ನೇತೃತ್ವದಲ್ಲಿ ಪ್ರಮುಖ ಅಧಿಕಾರಿಗಳ ಸಭೆ ನಡೆಯಿತು. ಈ ಸಂದರ್ಭ ಕರೋನಾ ವೈರಸ್ ತಡೆ ಹಾಗೂ ಎದುರಿಸಲು ಬೇಕಾದ ತುರ್ತು ಕ್ರಮಗಳ ಬಗ್ಗೆ ಚರ್ಚಿಸಲು ವಿಶೇಷ  ಕಾರ್ಯಪಡೆ ರಚಿಸಿ ಅದರ ಸದಸ್ಯರೊಂದಿಗೆ ತುರ್ತು ಸಭೆಯಲ್ಲಿ ನಡೆಯಿತು. ಈ ಸಂದರ್ಭ 1,700 ಹಾಸಿಗೆಗಳ ವಿಕ್ಟೋರಿಯಾ ಆಸ್ಪತ್ರೆಯನ್ನು ಸದ್ಯಕ್ಕೆ ಕೋವಿಡ್ -19 ಕೇರ್ ಹಬ್‌ ಆಗಿ ನಿರ್ವಹಿಸಲು ಪ್ರತ್ಯೇಕವಾಗಿ ಕಾಯ್ದಿರಿಸಲಾಗುವುದು ಎಂದು ಘೋಷಿಸಿದರು. ಈಗಾಗಲೇ ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳನ್ನು ಇತರ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗುವುದು.

ಸಭೆಯಲ್ಲಿ ಖ್ಯಾತ ಹೃದ್ರೋಗ ತಜ್ಞ  ಡಾ.ದೇವಿ ಶೆಟ್ಟಿ ಅವರೊಂದಿಗೆ ಉಪಮುಖ್ಯಮಂತ್ರಿ ಡಾ.ಅಶ್ವಥನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?
September 5, 2026
6:54 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror