ವಿಶೇಷ ವರದಿಗಳು

#ಕೊರೊನಾ ಲಾಕ್ಡೌನ್ | ಗುತ್ತಿಗಾರು ಗ್ರಾಮ ಪಂಚಾಯತ್ ನಿಂದ ಮತ್ತೊಂದು ಸುತ್ತಿನ ಮುನ್ನೆಚ್ಚರಿಕಾ ಕ್ರಮ | ಗ್ರಾಪಂ ಅಧ್ಯಕ್ಷ- ಪಿಡಿಒ ಅವರಿಂದಲೇ ಜಾಗೃತಿ ಸಂದೇಶ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್ ವತಿಯಿಂದ ಹಳ್ಳಿ ಹಳ್ಳಿಯಲ್ಲಿ ಕೊರೊನಾ ವೈರಸ್  ಹರಡುವುದು ತಡೆಯಲು ಜಾಗೃತಿ ಮೂಡಿಸಲಾಗುತ್ತಿದೆ. ಶುಕ್ರವಾರ ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು ಹಾಗೂ ಪಿಡಿಒ ಶ್ಯಾಮ ಪ್ರಸಾದ್ ಹಾಗೂ ಗ್ರಾಪಂ ಸದಸ್ಯ ರಾಕೇಶ್ ಮೆಟ್ಟಿನಡ್ಕ ಅವರ ನೇತೃತ್ವದಲ್ಲಿ ಎರಡನೇ ಬಾರಿ ಮೈಕ್ ಮೂಲಕ ಜಾಗೃತಿ ಸಂದೇಶ ನೀಡಲಾಯಿತು. ಸ್ವತ: ಗ್ರಾಪಂ ಅಧ್ಯಕ್ಷರು ಹಾಗೂ ಪಿಡಿಒ ಅವರೇ ಅನೌನ್ಸ್ ಮಾಡುವ ಮೂಲಕ ಗ್ರಾಮದ ಜನರಿಗೆ ಜಾಗೃತಿ ಮೂಡಿಸಿದರು.

Advertisement

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೊನಾ ವೈರಸ್ ಹರಡುವುದು  ಮಾತ್ರವಲ್ಲ ಗ್ರಾಮದಲ್ಲಿ  ಒಂದೇ ಒಂದು ಕೊರೊನಾ ವೈರಸ್ ಪ್ರಕರಣ ಕಂಡುಬರಬಾರದು ಎಂಬ ನೆಲೆಯಲ್ಲಿ  ಜಾಗೃತಿ ಹಾಗೂ ಕ್ರಮ ಕೈಗೊಳ್ಳಲಾಗುತ್ತಿದೆ. ಇದಕ್ಕಾಗಿ ವಾರದ ಹಿಂದೆಯೇ ಕೊರೊನಾ ವೈರಸ್ ತಡೆಗೆ ತುರ್ತು ಕಾರ್ಯಪಡೆ ರಚಿಸಲಾಗಿತ್ತು. ಅದಾದ ಬಳಿಕ ಹೊರ ದೇಶ ಹಾಗೂ ಹೊರಜಿಲ್ಲೆಗಳಿಂದ ಆಗಮಿಸಿದವರ ಬಗ್ಗೆ ಮಾಹಿತಿ ಕಲೆ ಹಾಕಿ ಅವರೆಲ್ಲರೂ ಕನಿಷ್ಟ 14 ದಿನಗಳ ಕಾಲ ಮನೆಯಿಂದ ಹೊರಬರದಂತೆ ಪ್ರತೀ ಮನೆಗೆ ತೆರಳಿ ಮಾಹಿತಿ ನೀಡಲಾಗಿತ್ತು. ನಂತರ ದಿನಸಿ ಅಂಗಡಿ, ತರಕಾರಿ ಅಂಗಡಿಗಳ ಮುಂದೆ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮಾರ್ಕ್ ಮಾಡುವ ವ್ಯವಸ್ಥೆ ಮಾಡಲಾಗಿತ್ತು. ಇದೀಗ ಎರಡನೇ ಬಾರಿಗೆ ಮೈಕ್ ಮೂಲಕ ಜಾಗೃತಿಗೆ ಅನೌನ್ಸ್ ಮಾಡಲಾಯಿತು. ಇದಕ್ಕಾಗಿ ಸ್ಥಳೀಯರೊಬ್ಬರು ಉಚಿತವಾಗಿ ಕಾರಿನ ವ್ಯವಸ್ಥೆಯನ್ನೂ ಮಾಡಿದ್ದರು.

ಗ್ರಾಮೀಣ ರಸ್ತೆಯಲ್ಲಿ ತೆರಳುತ್ತಿರುವ ವೀಡಿಯೋ :

Advertisement

ವಿಶೇಷ ಎಂದರೆ ಗ್ರಾಮ ಪಂಚಾಯತ್ ಅಧ್ಯಕ್ಷ ಅಚ್ಚುತ ಅವರ ಧ್ವನಿಯಲ್ಲೇ ಕೊರೊನಾ ಹಾಡೊಂದನ್ನು  ತಯಾರಿಸಿ ಜಾಗೃತಿ ಮೂಡಿಸುವ ಹಾಡನ್ನು  ಬಿತ್ತರಿಸಲಾಯಿತು. ಈ ಹಾಡನ್ನು ವ್ಯಾಟ್ಸಪ್ ಮೂಲಕವೂ ಗ್ರಾಮದ ಜನರಿಗೆ ತಿಳಿಸಲಾಯಿತು. 

ಸುಳ್ಯ ತಾಲೂಕಿನಾದ್ಯಂತ ಇಂತಹ ಮಾದರಿಯ ಜಾಗೃತಿ ಅಗತ್ಯವಾಗಿದೆ. ಈ ಜಾಗೃತಿಯನ್ನು ಗ್ರಾಮದ ಜನರು ಅನುಸರಿಸಿದರೆ ಸುಳ್ಯ ತಾಲೂಕು ಕೊರೊನಾ ವೈರಸ್ ಮುಕ್ತವಾಗಿಸುವತ್ತ ಹೆಜ್ಜೆ ಇಡಬಹುದಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆ.5-7 ಉತ್ತಮ ಮಳೆ – ಹವಾಮಾನ ಇಲಾಖೆ ಮಾಹಿತಿ

ರಾಜ್ಯದ ಕೆಲವು ಕಡೆ ಮಳೆ ಕಡಿಮೆ ಇದ್ದು, ಮುಂದಿನ 7 ದಿನಗಳ ಹವಾಮಾನ…

57 minutes ago

ಪ್ರೇಮ ಸಂಬಂಧದಲ್ಲಿ ಈ ರಾಶಿಯವರಿಗೆ ವಿಶ್ವಾಸದ ಕೊರತೆಯ ಸಮಸ್ಯೆ

ಪ್ರೇಮ ಸಂಬಂಧವು ಭಾವನಾತ್ಮಕ ಸಾಮರಸ್ಯ, ಪರಸ್ಪರ ಗೌರವ ಮತ್ತು ವಿಶ್ವಾಸದ ಮೇಲೆ ನಿಂತಿದೆ.…

1 hour ago

ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯ ಹೊಸ ಮಾದರಿಯ 6 ಕಾರು ಧರ್ಮಸ್ಥಳಕ್ಕೆ ಕೊಡುಗೆ

ದೇಶದ ಪ್ರತಿಷ್ಠಿತ ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯು ನೂತನವಾಗಿ ತಯಾರಿಸಿದ ಹೊಸ ಮಾದರಿಯ…

1 hour ago

ಅಡಿಕೆ ಕೊಳೆರೋಗ | ಶೇ.95 ರಷ್ಟು ಕೃಷಿಕರ ತೋಟದಲ್ಲಿ ಅಡಿಕೆ ಕೊಳೆರೋಗ | ಸಮೀಕ್ಷಾ ವರದಿಯ ಮಾಹಿತಿ

ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…

21 hours ago

ಸವಿರುಚಿ | ಹಲಸಿನ ಬೇಳೆ (ಹ ಬೀ) ಸೂಪ್‌

ಹಲಸಿನ ಬೇಳೆ ಸೂಪ್‌ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…

24 hours ago

ಬದುಕು ಪುರಾಣ | ಬದುಕಿಗಾಸರೆ, ಕಾಮಧೇನು

ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…

1 day ago