ಮಂಗಳೂರು: ಕೊರೊನಾ ವೈರಸ್ ಸೋಂಕಿತರ ಪ್ರಕರಣ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಸೋಮವಾರ ಎಲ್ಲಾ ಪರೀಕ್ಷೆಗಳೂ ನೆಗೆಟಿವ್ ಬಂದಿದೆ. ಆದರೆ ಕಾಸರಗೋಡು ಜಿಲ್ಲೆಯಲ್ಲಿ ಒಂದೇ ದಿನ 17 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 14 ಸ್ಯಾಂಪಲ್ ಗಳ ಪರಿಕ್ಷಾ ವರದಿ ಲಭ್ಯವಾಗಿದ್ದು, ಇದರಲ್ಲಿ 9 ನೆಗೆಟಿವ್ ವರದಿ ಲಭಿಸಿದೆ.ಉಳಿದ ಐದು ಮಂದಿಯ ವರದಿ ನಿರೀಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಉಡುಪಿಯಲ್ಲಿ ಸೋಮವಾರದಂದು ಎಲ್ಲವೂ ನೆಗೆಟಿವ್ ಪ್ರಕರಣಗಳೇ ದಾಖಲಾಗಿದೆ.
ಆದರೆ ಕಾಸರಗೋಡಿನಲ್ಲಿ ದಿನದಿಂದ ದಿನಕ್ಕೆ ಪ್ರಕರಣ ಹೆಚ್ಚುತ್ತಿದೆ. ಸೋಮವಾರ ಮತ್ತೆ 17 ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢವಾಗಿದೆ. ಹೀಗಾಗಿ ಸೋಂಕಿತರ ಸಂಖ್ಯೆ 106 ಕ್ಕೆ ಏರಿದೆ. ಒಟ್ಟು ಕೇರಳದಲ್ಲಿ ಕೇರಳದಲ್ಲಿ 213 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದರಲ್ಲಿ 106 ಮಂದಿ ಕಾಸರಗೋಡು ಜಿಲ್ಲೆಯವರು ಎಂಬುದು ದಕ ಜಿಲ್ಲೆಯ ಮಂದಿಯೂ ಆತಂಕದ ಸಂಗತಿಯಾಗಿದೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…