ಮಂಗಳೂರು/ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಒಂದು ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು101 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಇದೇ ಸಂದರ್ಭ ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರದಂದು 2 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಉಡುಪಿಯಲ್ಲಿ ಯಾವುದೇ ಪ್ರಕರಣ ಕಂಡುಬಂದಿಲ್ಲ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರದಂದು ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸುಳ್ಯ ಮೂಲಕ ವ್ಯಕ್ತಿಯಾಗಿರುವ 34 ವರ್ಷದ ಯುವಕ ದುಬೈನಿಂದ ಆಗಮಿಸಿದ್ದ. ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ನಿವಾಸಿಯಾದ ಈ ಯುವಕ ಮಾ. 18 ರಂದು ವಿದೇಶದಿಂದ ಬಂದಿದ್ದರು. ವಿಮಾನ ನಿಲ್ದಾಣದಲ್ಲಿ ತಪಾಸಣೆ ಸಂದರ್ಭದಲ್ಲಿ ಕೊರೊನಾ ವೈರಸ್ ನ ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಹೋ ಕ್ವಾರಂಟೆನ್ ನಲ್ಲಿ ಇರುವಂತೆ ಸೂಚಿಸಲಾಗಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಮಾ.28 ರಂದು ಸುಳ್ಯ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭದಲ್ಲಿ ಅವರ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ರವಾನಿಸಲಾಗಿದೆ. ಪರೀಕ್ಷಾ ವರದಿ ಮಾ.31 ರ ಮಂಗಳವಾರ ಲಭ್ಯವಾಗಿದ್ದು ಕೊರೊನಾ ವೈರಸ್ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಸಿಂದೂ ಬಿ. ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆದರೆ ಈ ಯುವಕ ಸದ್ಯ ಆರೋಗ್ಯವಾಗಿದ್ದ ಯಾವುದೇ ಆತಂಕವಿಲ್ಲ. ಚಿಕಿತ್ಸೆ ಮುಂದುವರಿದೆ.
ಮಂಗಳವಾರದಂದು ಒಟ್ಟು 41 ಮಂದಿ ಸ್ಕ್ರೀನಿಂಗ್ ಗೆ ಒಳಪಟ್ಟಿದ್ದು ಇದುವರೆಗೆ 5875 ಮಂದಿ ನಿಗಾದಲ್ಲಿದ್ದಾರೆ.
ಕಾಸರಗೋಡಿನಲ್ಲಿ 2 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 106 ಕ್ಕೆ ಏರಿಕೆಯಾಗಿದೆ.
ಸುಳ್ಯದಲ್ಲಿ ಮುಂಜಾಗ್ರತಾ ಕ್ರಮ : ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ನಿವಾಸಿಯಾದ ದುಬೈಯಿಂದ ಆಗಮಿಸಿದ ಯುವಕನಿಗೆ ಕೊರೊನಾ ವೈರಸ್ ಪಾಸಿಟವ್ ಪ್ರಕರಣ ಪತ್ತೆಯಾಗುತ್ತಿದ್ದಂತೆಯೇ ಈ ಯುವಕನ ನೇರ ಸಂಪರ್ಕದಲ್ಲಿ ಇದ್ದವರನ್ನು ಹಾಗೂ ಆತನ ಸಂಪರ್ಕದಲ್ಲಿದ್ದವರನ್ನು ಹೋಕ್ವಾರಂಟೇನ್ ಗೆ ಸಿದ್ಧತೆ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲಾ ರೀತಿಯ ಸಿ್ದ್ಧತೆಗೆ ಆರೋಗ್ಯ ಇಲಾಖೆ ಹಾಗೂ ತಾಲೂಕು ಆಡಳಿತ ಸಿದ್ಧತೆ ನಡೆಸಿದೆ.