ಕೊರೊನಾ ವೈರಸ್ | ದ ಕ ಜಿಲ್ಲೆಯಲ್ಲಿ 16 ನೆಗೆಟಿವ್ – 1 ಪಾಸಿಟಿವ್ | ರಾಜ್ಯದಲ್ಲಿ ಒಟ್ಟು 110 ಪ್ರಕರಣ |

April 1, 2020
10:19 PM

ಮಂಗಳೂರು: ಕೊರೊನಾ ವೈರಸ್ ಪರೀಕ್ಷಾ ವರದಿಯಲ್ಲಿ  ಬುಧವಾರ 17 ಮಂದಿಯ ವರದಿ ಬಂದಿದ್ದು ಇದರಲ್ಲಿ  16 ಮಂದಿಯ ಪರೀಕ್ಷಾ ವದರಿ ನೆಗೆಟಿವ್ ಬಂದಿದ್ದು 1 ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ಪುತ್ತೂರು ಮೂಲದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿತರ ಒಟ್ಟು ಸಂಖ್ಯೆ   ಸೋಂಕಿತರ ಸಂಖ್ಯೆ 9 ಕ್ಕೆ ಏರಿಕೆಯಾಗಿದೆ.

 ಮಾ.20 ರಂದು ಪುತ್ತೂರು ಮೂಲಕ 43 ವರ್ಷದ ಪುರುಷ ದುಬೈನಿಂದ ಬಂದಿದ್ದರು. ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿದ್ದರು. ಇದೀಗ ಸೋಂಕು ದೃಢಪಟ್ಟಿದೆ.

ಬುಧವಾರದಂದು 16 ಮಂದಿಯ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ. ಒಟ್ಟು 43 ಮಂದಿ ಕ್ವಾಂರೆಟೈನ್ ನಲ್ಲಿದ್ದಾರೆ. ರಾಜ್ಯದಲ್ಲಿ  ಇಂದು ಒಟ್ಟು 9 ಕೊರೊನಾ ವೈರಸ್ ಸೋಂಕಿತರು ಪತ್ತೆಯಾಗುವ ಮೂಲಕ 110 ಕ್ಕೆ ಏರಿಕೆಯಾಗಿದೆ.

ಇದೇ ವೇಳೆ ಉಡುಪಿಯಲ್ಲಿ  ಪಾಸಿಟವ್ ಪ್ರಕರಣ ಪತ್ತೆಯಾಗಿಲ್ಲ. ಕಾಸರಗೋಡಿನಲ್ಲಿ ಬುಧವಾರ ಕೂಡಾ ಕೊರೊನಾ ವೈರಸ್ ಪಾಸಿಟಿವ್ ವರದಿಗಳು ಬಂದಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror