ಮಂಗಳೂರು: ಕೊರೊನಾ ವೈರಸ್ ಪರೀಕ್ಷಾ ವರದಿಯಲ್ಲಿ ಬುಧವಾರ 17 ಮಂದಿಯ ವರದಿ ಬಂದಿದ್ದು ಇದರಲ್ಲಿ 16 ಮಂದಿಯ ಪರೀಕ್ಷಾ ವದರಿ ನೆಗೆಟಿವ್ ಬಂದಿದ್ದು 1 ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ಪುತ್ತೂರು ಮೂಲದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿತರ ಒಟ್ಟು ಸಂಖ್ಯೆ ಸೋಂಕಿತರ ಸಂಖ್ಯೆ 9 ಕ್ಕೆ ಏರಿಕೆಯಾಗಿದೆ.
ಮಾ.20 ರಂದು ಪುತ್ತೂರು ಮೂಲಕ 43 ವರ್ಷದ ಪುರುಷ ದುಬೈನಿಂದ ಬಂದಿದ್ದರು. ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿದ್ದರು. ಇದೀಗ ಸೋಂಕು ದೃಢಪಟ್ಟಿದೆ.
ಬುಧವಾರದಂದು 16 ಮಂದಿಯ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ. ಒಟ್ಟು 43 ಮಂದಿ ಕ್ವಾಂರೆಟೈನ್ ನಲ್ಲಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 9 ಕೊರೊನಾ ವೈರಸ್ ಸೋಂಕಿತರು ಪತ್ತೆಯಾಗುವ ಮೂಲಕ 110 ಕ್ಕೆ ಏರಿಕೆಯಾಗಿದೆ.
ಇದೇ ವೇಳೆ ಉಡುಪಿಯಲ್ಲಿ ಪಾಸಿಟವ್ ಪ್ರಕರಣ ಪತ್ತೆಯಾಗಿಲ್ಲ. ಕಾಸರಗೋಡಿನಲ್ಲಿ ಬುಧವಾರ ಕೂಡಾ ಕೊರೊನಾ ವೈರಸ್ ಪಾಸಿಟಿವ್ ವರದಿಗಳು ಬಂದಿವೆ.
ವಿವಾಹದ ವಿಳಂಬ, ಸಂತಾನದ ಕೊರತೆ, ಮತ್ತು ಆರ್ಥಿಕ ಅಡೆತಡೆಗಳಿಗೆ ಕಾರಣವಾಗಬಹುದು. ಸರ್ಪಸಂಸ್ಕಾರವು ಈ…
ಆಗಸ್ಟ್ 2ನೇ ವಾರದಲ್ಲಿ ತಮಿಳುನಾಡು ಕರಾವಳಿಯ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ…
ಅಮಾಯಕ ನಾಗರಿಕರನ್ನು ಬಲಿಗೆ ಹಾಕುವ ಕಾನೂನು ಡಿಜಿಟಲ್ ಸಿಗ್ನೇಜರಿದ್ದು ಮಾತ್ರವಲ್ಲ, ಇನ್ನು ಅನೇಕ…
ಯೂರಿಯಾ ಗೊಬ್ಬರ ಅಭಾವದ ನಡುವೆಯೇ ರಾಜ್ಯದಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಕಾಡಾನೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ…
ಕೊಡಗು ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಸುಮಾರು…