ಕೊರೊನಾ ವೈರಸ್ | ದ ಕ ಜಿಲ್ಲೆಯಲ್ಲಿ ಇನ್ನಷ್ಟು ಮುಂಜಾಗ್ರತಾ ಕ್ರಮ | ರಾಜ್ಯದಲ್ಲಿ ಮತ್ತೆ 4 ಕೊರೊನಾ ವೈರಸ್ ಪಾಸಿಟಿವ್ |

April 19, 2020
2:29 PM

ಮಂಗಳೂರು:  ದ.ಕ ಜಿಲ್ಲೆಯಲ್ಲಿ ಶನಿವಾರದಿಂದ ಇದುವರೆಗೆ ಯಾವುದೇ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿಲ್ಲ. ಆದರೆ ಮುಂಜಾಗ್ರತಾ ಕ್ರಮಗಳನ್ನು  ಬಿಗುಗೊಳಿಸಿದೆ. ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮ ಹಾಗೂ ತುಂಬೆ ಗ್ರಾಮ, ಬೆಳ್ತಂಗಡಿ ತಾಲೂಕಿನ ಜನತಾ ಕಾಲೋನಿ-ಕರಯ ಗ್ರಾಮ, ಮಂಗಳೂರು ತಾಲೂಕಿನ ಸ್ಮಾರ್ಟ್ ಪ್ಲಾನೆಟ್‌, ತೊಕೊಟ್ಟು, ಪುತ್ತೂರು ತಾಲೂಕಿನ ಸಂಪ್ಯ  ಹಾಗೂ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮಗಳ ಪ್ರದೇಶ ಹಾಗೂ ಉಪ್ಪಿನಂಗಡಿಯನ್ನು ಕಂಟೈನ್‌ಮೆಂಟ್‌ ಝೋನ್‌ಗಳೆಂದು ಗುರುತಿಸಲಾಗಿದೆ.

Advertisement

ದ.ಕ. ಜಿಲ್ಲೆಯಲ್ಲಿ ಶನಿವಾರ ಲಭ್ಯವಾದ ವರದಿಯ ಪ್ರಕಾರ 46 ಪರೀಕ್ಷಾ ವರದಿಗಳು ಸಿಕ್ಕಿವೆ. ಎಲ್ಲಾ 28 ಪ್ರಕರಣಗಳು ನೆಗೆಟಿವ್ ಆಗಿವೆ.  ಒಟ್ಟು 39,196ಮಂದಿಯನ್ನು ಸ್ಕ್ರೀನಿಂಗ್ ಗೆ ಒಳಪಡಿಸಲಾಗಿದೆ. 260 ಮಂದಿ ಮನೆಯಲ್ಲೇ ಕ್ವಾರಂಟೈನ್ ನಲ್ಲಿದ್ದಾರೆ. ಇನ್ನು 15 ಮಂದಿ ಇಎಸ್ ಐ ಆಸ್ಪತ್ರೆಯಲ್ಲಿ ನಿಗಾದಲ್ಲಿದ್ದಾರೆ. 5813 ಮಂದಿ ಈಗಾಗಲೇ 28 ದಿನಗಳ ಕ್ವಾರಂಟೈನ್ ಪೂರೈಸಿದ್ದಾರೆ.  13 ಪ್ರಕರಣಗಳು ಪಾಸಿಟಿವ್ ಆಗಿದೆ.  ಒಬ್ಬರು ಚಿಕಿತ್ಸೆಯನ್ನು ಪಡೆಯುತ್ತಿದ್ದರೆ, 12 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ರಾಜ್ಯದಲ್ಲಿ  ಭಾನುವಾರ ಮಧ್ಯಾಹ್ನದವರೆಗೆ  4 ಹೊಸ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಒಟ್ಟು 388 ಪ್ರಕರಣ ಪತ್ತೆಯಾದಂತಾಗಿದೆ. ಇದರಲ್ಲಿ  105 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.  14 ಮಂದಿ ಸಾವನ್ನಪ್ಪಿದ್ದಾರೆ.

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆ.5-7 ಉತ್ತಮ ಮಳೆ – ಹವಾಮಾನ ಇಲಾಖೆ ಮಾಹಿತಿ
August 4, 2025
7:55 AM
by: The Rural Mirror ಸುದ್ದಿಜಾಲ
ಪ್ರೇಮ ಸಂಬಂಧದಲ್ಲಿ ಈ ರಾಶಿಯವರಿಗೆ ವಿಶ್ವಾಸದ ಕೊರತೆಯ ಸಮಸ್ಯೆ
August 4, 2025
7:38 AM
by: ದ ರೂರಲ್ ಮಿರರ್.ಕಾಂ
ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯ ಹೊಸ ಮಾದರಿಯ 6 ಕಾರು ಧರ್ಮಸ್ಥಳಕ್ಕೆ ಕೊಡುಗೆ
August 4, 2025
7:26 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಕೊಳೆರೋಗ | ಶೇ.95 ರಷ್ಟು ಕೃಷಿಕರ ತೋಟದಲ್ಲಿ ಅಡಿಕೆ ಕೊಳೆರೋಗ | ಸಮೀಕ್ಷಾ ವರದಿಯ ಮಾಹಿತಿ
August 3, 2025
12:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group