ಮಂಗಳೂರು: ದ.ಕ ಜಿಲ್ಲೆಯಲ್ಲಿ ಶನಿವಾರದಿಂದ ಇದುವರೆಗೆ ಯಾವುದೇ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ. ಆದರೆ ಮುಂಜಾಗ್ರತಾ ಕ್ರಮಗಳನ್ನು ಬಿಗುಗೊಳಿಸಿದೆ. ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮ ಹಾಗೂ ತುಂಬೆ ಗ್ರಾಮ, ಬೆಳ್ತಂಗಡಿ ತಾಲೂಕಿನ ಜನತಾ ಕಾಲೋನಿ-ಕರಯ ಗ್ರಾಮ, ಮಂಗಳೂರು ತಾಲೂಕಿನ ಸ್ಮಾರ್ಟ್ ಪ್ಲಾನೆಟ್, ತೊಕೊಟ್ಟು, ಪುತ್ತೂರು ತಾಲೂಕಿನ ಸಂಪ್ಯ ಹಾಗೂ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮಗಳ ಪ್ರದೇಶ ಹಾಗೂ ಉಪ್ಪಿನಂಗಡಿಯನ್ನು ಕಂಟೈನ್‌ಮೆಂಟ್ ಝೋನ್‌ಗಳೆಂದು ಗುರುತಿಸಲಾಗಿದೆ.
ದ.ಕ. ಜಿಲ್ಲೆಯಲ್ಲಿ ಶನಿವಾರ ಲಭ್ಯವಾದ ವರದಿಯ ಪ್ರಕಾರ 46 ಪರೀಕ್ಷಾ ವರದಿಗಳು ಸಿಕ್ಕಿವೆ. ಎಲ್ಲಾ 28 ಪ್ರಕರಣಗಳು ನೆಗೆಟಿವ್ ಆಗಿವೆ. ಒಟ್ಟು 39,196ಮಂದಿಯನ್ನು ಸ್ಕ್ರೀನಿಂಗ್ ಗೆ ಒಳಪಡಿಸಲಾಗಿದೆ. 260 ಮಂದಿ ಮನೆಯಲ್ಲೇ ಕ್ವಾರಂಟೈನ್ ನಲ್ಲಿದ್ದಾರೆ. ಇನ್ನು 15 ಮಂದಿ ಇಎಸ್ ಐ ಆಸ್ಪತ್ರೆಯಲ್ಲಿ ನಿಗಾದಲ್ಲಿದ್ದಾರೆ. 5813 ಮಂದಿ ಈಗಾಗಲೇ 28 ದಿನಗಳ ಕ್ವಾರಂಟೈನ್ ಪೂರೈಸಿದ್ದಾರೆ. 13 ಪ್ರಕರಣಗಳು ಪಾಸಿಟಿವ್ ಆಗಿದೆ. ಒಬ್ಬರು ಚಿಕಿತ್ಸೆಯನ್ನು ಪಡೆಯುತ್ತಿದ್ದರೆ, 12 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ರಾಜ್ಯದಲ್ಲಿ ಭಾನುವಾರ ಮಧ್ಯಾಹ್ನದವರೆಗೆ 4 ಹೊಸ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಒಟ್ಟು 388 ಪ್ರಕರಣ ಪತ್ತೆಯಾದಂತಾಗಿದೆ. ಇದರಲ್ಲಿ 105 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 14 ಮಂದಿ ಸಾವನ್ನಪ್ಪಿದ್ದಾರೆ.
ಮುಂದಿನ ಎರಡು ಮೂರು ದಿನಗಳಲ್ಲಿ ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ…
ವಿಧಾತ್ರಿ ಎಂ, 6 ನೇ ತರಗತಿ, ರೋಟರಿ ಮಿಡ್‌ಟೌನ್ ಶಾಲೆ, ಮೈಸೂರು | …
ನೈನಿಕಾ.ಬಿ.ಸಿ , 4ನೇ ತರಗತಿ , ಸೈಂಟ್ ಆನ್ಸ್ ಇಂಗ್ಲಿಷ್ ಮಾಧ್ಯಮ ಶಾಲೆ,…
ನಯೋನಿಕಾ.ಬಿ.ಸಿ., 4 ನೇ ತರಗತಿ, ಸೈಂಟ್ ಆನ್ಸ್ ಶಾಲೆ ಕಡಬ | -…
ನಿಪಾ ವೈರಸ್ ಹರಡುವಿಕೆಯ ವಿರುದ್ಧ ರಾಜ್ಯವು ತನ್ನ ತಡೆಗಟ್ಟುವ ಕ್ರಮಗಳನ್ನು ತೀವ್ರಗೊಳಿಸಿದೆ ಎಂದು…
ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ದೇವರು ಹಾಗೂ ಗುರು…