Advertisement
ಸುದ್ದಿಗಳು

ಕೊರೊನಾ ವೈರಸ್ | ದ ಕ ಜಿಲ್ಲೆಯ ಭಾನುವಾರದ ಅಪ್ಡೇಟ್ಸ್ “ಕಹಿ” | ಬಂಟ್ವಾಳದ ಮೃತ ಮಹಿಳೆಗೆ ಕೊರೊನಾ ಪಾಸಿಟಿವ್ | ಉಪ್ಪಿನಂಗಡಿಯಲ್ಲಿ ಇನ್ನೊಂದು ಪಾಸಿಟಿವ್ |

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ 13 ದಿನಗಳಿಂದ ನೆಮ್ಮದಿಯಾಗಿತ್ತು. ಇದೀಗ ಭಾನುವಾರ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟ ಬಂಟ್ವಾಳದ ಮಹಿಳೆಗೆ ಕೊರೊನಾ ಪಾಸಿಟಿವ್ ಬಂದಿದೆ. ಇದರ ಬೆನ್ನಲ್ಲೇ ಉಪ್ಪಿನಂಗಡಿಯಲ್ಲೂ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಎ.17ರಂದು ಉಪ್ಪಿನಂಗಡಿ ಮೂಲದ ವ್ಯಕ್ತಿಯಲ್ಲಿ ಪಾಸಿಟಿವ್ ಪತ್ತೆಯಾಗಿತ್ತು.ಬಳಿಕ ವೆನ್ಲಾಕ್ ಆಸ್ಪತ್ರೆಯಲ್ಲಿ  ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಅದೇ ವ್ಯಕ್ತಿಯ ಪತ್ನಿಯಲ್ಲಿ ಏಪ್ರಿಲ್ 19ರಂದು ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.

ಬಂಟ್ವಾಳ ನಗರ ಸೀಲ್ ಡೌನ್:

ಕೊರೊನಾ ವೈರಸ್ ಗೆ ಬಂಟ್ವಾಳದ ಮಹಿಳೆ ಮೃತಪಟ್ಟ ಬೆನ್ನಲ್ಲೇ ಬಂಟ್ವಾಳ ನಗರವನ್ನು ಸೀಲ್ ಡೌನ್ ಮಾಡಲಾಗಿದೆ. ಬಂಟ್ವಾಳ ಕಸಬಾ, ಜಕ್ರಿಬೆಟ್ಟು, ಬಡ್ಡಕಟ್ಟೆ ಸಹಿತ ಪಟ್ಟಣಕ್ಕೆ ಪ್ರವೇಶಿಸುವ ಮತ್ತು ಹೊರ ಹೋಗುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಸಾವನ್ನಪ್ಪಿರುವ ಮಹಿಳೆಯ ಮನೆ ಬಂಟ್ವಾಳ ಪೇಟೆಯಲ್ಲಿದೆ. ಈ ಹಿನ್ನೆಲೆಯಲ್ಲಿ ಅದರ ಸುತ್ತಮುತ್ತ ಸುಮಾರು 300ಕ್ಕೂ ಅಧಿಕ ಮನೆಗಳು, ಅಂಗಡಿ ಮುಂಗಟ್ಟುಗಳಿವೆ. ಈ ಎಲ್ಲಾ ಪ್ರದೇಶಗಳಿಗೂ ಪೊಲೀಸರು ತೆರಳಿ ಮನೆಯಿಂದ ಯಾರೂ ಹೊರ ಬರದಂತೆ ಸೂಚಿಸುತ್ತಿದ್ದಾರೆ. ಒಟ್ಟು 3 ಭಾಗವಾಗಿ ಸೀಲ್ ಮಾಡಲಾಗಿದೆ.  ಮೃತ ಮಹಿಳೆಯ ಮನೆಯಿಂದ 100 ಮೀ. ಅಂತರದಲ್ಲಿ ಕಠಿಣ ಲಾಕ್ಡೌನ್,   ಸುತ್ತ 500 ಮೀ. ಅಂತರದಲ್ಲಿ ತೀವ್ರ ನಿಗಾ ಹಾಗೂ 3. 3 ಕಿ.ಮೀ. ಅಂತರದಲ್ಲಿ ಕಂಪ್ಲೀಟ್ ಸೀಲ್ಡೌನ್.

ಕೊರೊನಾ ಸೊಂಕಿಗೆ ಬಲಿಯಾದ ಮಹಿಳೆಯ ಕುಟುಂಬದ ಮೇಲೆ ತೀವ್ರ ನಿಗಾ ಇರಿಸಲಾಗಿದ್ದು, ಅನಾರೋಗ್ಯ ಹಿನ್ನೆಲೆಯಲ್ಲಿ ಮೃತರ ಅತ್ತೆಯನ್ನು ಐಸಿಯುಗೆ ದಾಖಲಿಸಲಾಗಿದೆ. ಅವರೊಂದಿಗೆ ಮಹಿಳೆಯ ಪತಿ ಹಾಗೂ ವಿದೇಶದಿಂದ ಬಂದಿದ್ದ ಮಗನನ್ನು ಕೂಡ ಕ್ವಾರಂಟೈನ್ ಗೆ  ಒಳಪಡಿಸಲಾಗಿದೆ. ಮೃತ ಮಹಿಳೆಯ ಪುತ್ರನಿಗೆ ವಿದೇಶ ಪ್ರವಾಸದ ಹಿಸ್ಟರಿ ಇದೆ ಎನ್ನಲಾಗಿದೆ. ಆದರೆ ಅವರಿಗೆ ಕೊರೊನಾ ವೈರಸ್ ಕಂಡುಬಂದಿರಲಿಲ್ಲ.  ಇದೀಗ ಮಹಿಳೆಯೊಂದಿಗೆ ಸಂಪರ್ಕದಲ್ಲಿದ್ದ 20 ಮಂದಿಯನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 10 ಮಂದಿಗಾಗಿ ಹುಡುಕಾಟ ನಡೆದಿದೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

2 hours ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

3 hours ago

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…

ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…

12 hours ago

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

19 hours ago

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…

19 hours ago

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು…

1 day ago