ಮಂಗಳೂರು:ಕೊರೊನಾ ವೈರಸ್ ಹರಡುವ ಭೀತಿ ಇರುವುದರಿಂದ ದ ಕ ಜಿಲ್ಲೆಯಾದ್ಯಂತ ಮಾ.31 ರವರೆಗೆ ಅಗತ್ಯ ಸೇವೆಗಳು ಮಾತ್ರವೇ ಲಭ್ಯವಿರುತ್ತದೆ. ಇತರ ಸೇವೆಗಳು ಬಹುತೇಕ ಬಂದ್ ಆಗಿರುತ್ತವೆ. ಇದನ್ನು ಸಾರ್ವಜನಿಕರು ಲಘುವಾಗಿ ಪರಿಗಣಿಸಬೇಡಿ ಎಂದು ದ ಕ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ತಿಳಿಸಿದ್ದಾರೆ.
ಸೋಮವಾರದಿಂದ ದ ಕ ಜಿಲ್ಲೆಯಲ್ಲಿ ಲಾಕ್ ಡೌನ್ ಎಂದರೂ ಅಂಗಡಿಗಳು ತೆರದಿದ್ದು ಜನಸಂಚಾರವೂ ಸಹಜ ಸ್ಥಿತಿಯಲ್ಲಿದ್ದ ಬಗ್ಗೆ ದೂರುಗಳು ಬಂದಿವೆ. ಸರಕಾರದ ಸೂಚನೆಯನ್ನು ಪ್ರತಿಯೊಬ್ಬರೂ ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಅವರು ಹೇಳಿದ್ದಾರೆ. ಸಾಮೂಹಿಕವಾಗಿ ಈ ರೋಗ ಹರಡಲು ಆರಂಭವಾದರೆ, ನಿಯಂತ್ರಣ ಮಾಡಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಇದನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಅನಗತ್ಯವಾಗಿ ಓಡಾಡುವುದನ್ನು ನಿಲ್ಲಿಸಿ, ಅಂಗಡಿ ಮುಂಗಟ್ಟು ಬಂದ್ ಮಾಡಿ ಇಲ್ಲದಿದ್ದರೆ ಕಠಿಣ ಕ್ರಮಕೈಗೊಳ್ಳುವುದು ಅನಿವಾರ್ಯವಾದೀತು ಎಂದು ಜಿಲ್ಲಾಧಿಕಾರಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel